ನವದೆಹಲಿ:ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಮಹಿಳಾ ಕ್ರಿಕೆಟ್ ಆಟಕ್ಕೆ ಅವಕಾಶ ಸಿಕ್ಕಿದ್ದು, ಹರ್ಮನ್ಪ್ರೀತ್ ಕೌರ್ ನೇತೃತ್ವದ ಮಹಿಳಾ ಬಳಗ ಪಾಕಿಸ್ತಾನದ ವಿರುದ್ಧ ಸೆಣಸಾಟ ನಡೆಸಲಿದೆ. ಉಭಯ ತಂಡಗಳ ಮಧ್ಯೆ ಜುಲೈ 31ರಂದು ಪಂದ್ಯ ನಡೆಯಲಿದೆ. ಅದಕ್ಕಾಗಿ ಕ್ರಿಕೆಟ್ ಪ್ರೇಮಿಗಳು ಕಾತುರರಾಗಿದ್ದು, ಟಿಕೆಟ್ ಖರೀದಿ ಮಾಡ್ತಿದ್ದಾರೆ. ಇಲ್ಲಿಯವರೆಗಿನ ಮಾಹಿತಿ ಪ್ರಕಾರ ಬರೋಬ್ಬರಿ 1.2 ಮಿಲಿಯನ್ ಟಿಕೆಟ್ ಮಾರಾಟಗೊಂಡಿವೆ.
ಎಡ್ಜಬಾಸ್ಟನ್ ಮೈದಾನದಲ್ಲಿ ಉಭಯ ದೇಶಗಳ ಮಧ್ಯೆ ಕ್ರಿಕೆಟ್ ಪಂದ್ಯ ನಡೆಯಲಿದ್ದು, ಎಲ್ಲರ ಆಕರ್ಷಣೆ ಕೇಂದ್ರ ಬಿಂದುವಾಗಿರುವ ಈ ಮ್ಯಾಚ್ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ಖರೀದಿ ಮಾಡ್ತಿದ್ದಾರೆ. ಜುಲೈ 28ರಿಂದ ಬರ್ಮಿಗ್ಹ್ಯಾಮ್ನಲ್ಲಿ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಚಾಲನೆ ಸಿಗಲಿದೆ ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ. ಎಡ್ಜಬಾಸ್ಟನ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತ ಹಾಗೂ ಪಾಕಿಸ್ತಾನದ ಪ್ರಜೆಗಳು ವಾಸವಾಗಿದ್ದು, ಪಂದ್ಯ ವೀಕ್ಷಣೆ ಮಾಡಲು ತೆರಳಲಿದ್ದಾರೆ. ಇದರ ಜೊತೆಗೆ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯದ ಟಿಕೆಟ್ಗೂ ಹೆಚ್ಚಿನ ಬೇಡಿಕೆ ಬಂದಿದೆ ಎಂದು ಕ್ರೀಡಾಕೂಟದ ಸಿಇಒ ಅಯಾನ್ ರೈಡ್ ತಿಳಿಸಿದ್ದಾರೆ.