ಸೆಂಚುರಿಯನ್ (ದಕ್ಷಿಣ ಆಫ್ರಿಕಾ): ಇಂದಿನಿಂದ ದಕ್ಷಿಣ ಆಫ್ರಿಕಾ ಮತ್ತು ಭಾರತ ತಂಡಗಳ ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಿದೆ. ಇಂದು ಇಲ್ಲಿನ ಸೆಂಚುರಿಯನ್ ಅಂಗಣದಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಟೀಂ ಇಂಡಿಯಾ ಪ್ಲೇಯಿಂಗ್ XI
ವಿರಾಟ್ ಕೊಹ್ಲಿ ನಾಯಕತ್ವದ ಭಾರತದ ತಂಡದಲ್ಲಿ ಕೆ.ಎಲ್ ರಾಹುಲ್ ಉಪನಾಯಕನಾಗಿದ್ದು, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ವಿಕೆಟ್ ಕೀಪರ್), ರಿಷಬ್ ಪಂತ್, ಶಾರ್ದುಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್ ಹಾಗೂ ಮೊಹಮ್ಮದ್ ಸಿರಾಜ್ ಇದ್ದಾರೆ.
ಟೀಂ ಸೌತ್ ಆಫ್ರಿಕಾ ಪ್ಲೇಯಿಂಗ್ XI
ಡೀನ್ ಎಲ್ಗರ್ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡದಲ್ಲಿ ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಟೆಂಬಾ ಬವುಮಾ, ಕ್ವಿಂಟನ್ ಡಿ ಕಾಕ್, ವಿಯಾನ್ ಮುಲ್ಡರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೋ ರಬಾಡ, ಲುಂಗಿ ಎನ್ಗಿಡಿ ಆಡಲಿದ್ದಾರೆ.
ಇದನ್ನೂ ಓದಿ: U19 Asia Cup: ಪಾಕ್ ವಿರುದ್ಧ ಲಾಸ್ಟ್ ಓವರ್ ಥ್ರಿಲ್ಲರ್ನಲ್ಲಿ 'ಗೆಲುವು' ಕೈಚೆಲ್ಲಿದ ಭಾರತ
ದ್ರಾವಿಡ್ ಮಾರ್ಗದರ್ಶನದಲ್ಲಿ ಇತಿಹಾಸ ಸೃಷ್ಟಿಸುತ್ತಾ ಭಾರತ?
ರವಿಶಾಸ್ತ್ರಿ ಬಳಿಕ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕವಾಗಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಟೀಂ ಇಂಡಿಯಾ ಈವರೆಗೆ ಟೆಸ್ಟ್ ಸರಣಿ ಗೆದ್ದಿರುವ ನಿದರ್ಶನವಿಲ್ಲ. ಹಾಗಾಗಿ, ದ್ರಾವಿಡ್ ಅವರ ಚೊಚ್ಚಲ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾ ಈ ಬಾರಿ ಟೆಸ್ಟ್ ಸರಣಿ ಗೆದ್ದು ಇತಿಹಾಸ ಬರೆಯುವ ಭರವಸೆ ಮೂಡಿಸಿದೆ.