ದುಬೈ: 2023ರ ಏಷ್ಯಾಕಪ್ ಪಾಕಿಸ್ತಾನದಲ್ಲಿ ನಡೆಯಲಿದ್ದು, ಅದರು 50 ಓವರ್ಗಳ ಟೂರ್ನಿಯಾಗಿರಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ರಮೀಜ್ ರಾಜಾ ಅವರು ಹೇಳಿದ್ದಾರೆ. ಇದು ಅದೇ ವರ್ಷ ನಡೆಯಲಿರುವ ಏಕದಿನ ವಿಶ್ವಕಪ್ಗೆ ಪೂರ್ವಭಾವಿಯಾಗಿ ಆಯೋಜಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಪಾಕಿಸ್ತಾನದ ಮಾಜಿ ನಾಯಕ, ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ದ್ವಿಪಕ್ಷೀಯ ಸರಣಿ ನಡೆಯುವ ಅವಕಾಶ ತುಂಬಾ ಕಡಿಮೆ, ಅದು ಉತ್ತಮ ಹಂತಕ್ಕೆ ಬರಬೇಕಾದರೆ ಇನ್ನೂ ಸಾಕಷ್ಟು ಕೆಲಸ ನಡೆಯಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ ಶಾ ಇದ್ದ ಎಸಿಸಿ ಸಭೆಯಲ್ಲಿ ರಮೀಜ್ ಭಾಗವಹಿಸಿದ್ದರು. ಎಸಿಸಿ 2023ರ ಏಷ್ಯಾಕಪ್ ಪಾಕಿಸ್ತಾನದಲ್ಲಿ ಆಯೋಜಿಸಲು ಒಪ್ಪಿಗೆ ಸೂಚಿಸಿದೆ. ಈ ಟೂರ್ನಿ 50 ಓವರ್ಗಳ ಸ್ಪರ್ಧೆಯಾಗಿರಲಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿದೆ. ಇದು ಭಾರತದಲ್ಲಿ ಅದೇ ವರ್ಷ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ಗೆ ಉತ್ತಮವಾಗಿ ಹೊಂದಿಕೊಳ್ಳಲಿದೆ ಎಂದು ರಾಜಾ ಪಿಸಿಬಿ ವೆಬ್ಸೈಟ್ಗೆ ಹೇಳಿದ್ದಾರೆ.