ರಾಂಚಿ(ಜಾರ್ಖಂಡ್): ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ (India vs New Zealand) ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದ ಪರ ಬಲಗೈ ವೇಗದ ಬೌಲರ್ ಹರ್ಷಲ್ ಪಟೇಲ್ ಪದಾರ್ಪಣೆ ಮಾಡಿದ್ದಾರೆ.
ಜೈಪುರ್ ಸವಾಯಿ ಮಾನ್ಸಿಂಗ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಈಗಾಗಲೇ ಗೆಲುವು ದಾಖಲು ಮಾಡಿರುವ ರೋಹಿತ್ ಶರ್ಮಾ ಇಂದಿನ ಪಂದ್ಯದಲ್ಲಿ ಗೆದ್ದು, ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ದಾಖಲು ಮಾಡಿದರೆ ಕ್ಯಾಪ್ಟನ್ ಆಗಿ ರೋಹಿತ್ ಶರ್ಮಾ (Rohit Sharma) ಹಾಗೂ ಕೋಚ್ ರಾಹುಲ್ ದ್ರಾವಿಡ್ಗೆ ಸ್ಮರಣಿಯ ಸರಣಿಯಾಗಲಿದೆ. ಜೈಪುರ್ದ ರಾಂಚಿಯಲ್ಲಿ ಈ ಪಂದ್ಯ ಆರಂಭಗೊಂಡಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ(IPL) ಆರ್ಸಿಬಿ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿರುವ ಹರ್ಷಲ್ ಪಟೇಲ್ ಇಂದಿನ ಪಂದ್ಯಕ್ಕಾಗಿ ಟೀಂ ಇಂಡಿಯಾ ಪರ ಡೆಬ್ಯು ಮಾಡಿದ್ದು, ಮೊಹಮ್ಮದ್ ಸಿರಾಜ್ ಬದಲಿಗೆ ಈ ಬೌಲರ್ಗೆ ಮಣೆ ಹಾಕಲಾಗಿದೆ.
ಇದನ್ನೂ ಓದಿ:ವಿಗ್ರಹಕ್ಕೆ ಚಿಕಿತ್ಸೆ ನೀಡಲು ನಿರಾಕರಿಸಿದ ವೈದ್ಯ.. ಕೋಪಗೊಂಡ ಅರ್ಚಕ ಮಾಡಿದ್ದೇನು ಗೊತ್ತಾ?