ಇಂದೋರ್ (ಮಧ್ಯಪ್ರದೇಶ): ಆಸ್ಟ್ರೇಲಿಯಾದ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ಟೀಮ್ ಇಂಡಿಯಾದ ಬ್ಯಾಟರ್ ಸೂರ್ಯಕುಮಾರ್ ಯಾದವ್ ತಮ್ಮ ಏಕದಿನ ಕ್ರಿಕೆಟ್‌ನಲ್ಲಿ ವೃತ್ತಿಜೀವನದ ಅತ್ಯುತ್ತಮ ಇನ್ನಿಂಗ್ಸ್ ಆಡಿದರು. ಆಸ್ಟ್ರೇಲಿಯಾದ ಬೌಲರ್‌ಗಳ ಬೆವರಿಳಿಸಿದ ಅವರು ಅರ್ಧ ಶತಕ ಪೂರೈಸಿದರು.
ಸೂರ್ಯಕುಮಾರ್ ಯಾದವ್ ಅವರ ಇನ್ನಿಂಗ್ಸ್‌ನಲ್ಲಿ ಸಿಕ್ಸರ್ ಮತ್ತು ಬೌಂಡರಿಗಳ ಸುರಿಮಳೆಯೇ ಕಂಡು ಬಂತು. ಸೂರ್ಯ ಕುಮಾರ್ ಯಾದವ್ ತಮ್ಮ ಸ್ಫೋಟಕ ಬ್ಯಾಟಿಂಗ್ನಿಂದ ಪ್ರವಾಸಿ ತಂಡದ ವಿರುದ್ಧ ತಮ್ಮ ಏಕದಿನ ಕ್ರಿಕೆಟ್ನ ವೃತ್ತಿಜೀವನದ ನಾಲ್ಕನೇ ಅರ್ಧಶತಕ ಗಳಿಸಿದರು. ಅಷ್ಟೇ ಅಲ್ಲ ಆಸ್ಟ್ರೇಲಿಯಾದ ವೇಗಿ ಕ್ಯಾಮರೂನ್ ಗ್ರೀನ್ ಅವರ ಒಂದು ಓವರ್‌ನಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಕ್ ಟು ಬ್ಯಾಕ್ ಸಿಕ್ಸರ್ ಬಾರಿಸುವ ಮೂಲಕ ಸಂಚಲನ ಮೂಡಿಸಿದರು.
44ನೇ ಓವರ್‌ನಲ್ಲಿ ಆಸ್ಟ್ರೇಲಿಯಾದ ಬೌಲರ್ ಕ್ಯಾಮರೂನ್ ಗ್ರೀನ್ ಬೌಲಿಂಗ್ ಮಾಡುತ್ತಿದ್ದರು. ಆಗ ಸೂರ್ಯಕುಮಾರ್ ಯಾದವ್ ಬ್ಯಾಟ್ ಮಾಡುತ್ತಿದ್ದರು. ಗ್ರೀನ್ ಅವರ ಮೊದಲ ಎಸೆತದಲ್ಲೇ ಸೂರ್ಯಕುಮಾರ್ ಯಾದವ್ ಫೈನ್ ಲೆಗ್ ಕಡೆಗೆ ಸಿಕ್ಸರ್ ಬಾರಿಸಿದರು. ಎರಡನೇ ಎಸೆತವನ್ನು ಸ್ಕೂಪ್-ಸ್ವೀಪ್ ಮಾಡಿದ ಅವರು ಬಾಲ್ ಅನ್ನು ಬೌಂಡರಿಯಿಂದ ಹೊರಗೆ ಕಳುಹಿಸಿದರು. ಮೂರನೇ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ ಕವರ್ ಮೇಲೆ ಸಿಕ್ಸರ್ ಬಾರಿಸಿದರು. ಅವರು ಓವರ್‌ನ ನಾಲ್ಕನೇ ಎಸೆತವನ್ನು ಸ್ಕ್ವೇರ್ ಲೆಗ್ ಕಡೆಗೆ ಬಾಲ್ಗೆ ದಿಕ್ಕು ತೋರಿಸಿದರು.