ನವದೆಹಲಿ: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ನ ನಾಲ್ಕನೇ ದಿನದಾಟಕ್ಕೂ ಮುನ್ನ ಭಾರತೀಯ ಆಟಗಾರರು ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಲಾರ್ಡ್ಸ್ನಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಿಸಿದರು.
ಭಾರತೀಯ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ರಾಷ್ಟ್ರಧ್ವಜ ಹಾರಿಸಿ, ರಾಷ್ಟ್ರಗೀತೆಯನ್ನು ಹಾಡಿದರು. ಕಾರ್ಯಕ್ರಮದ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.
"75ನೇ ಸ್ವಾತಂತ್ರ್ರೋತ್ಸವದ ಪ್ರಯುಕ್ತ ಭಾರತ ತಂಡದ ಸದಸ್ಯರು ಒಟ್ಟಾಗಿ ಸೇರಿ ಧ್ವಜರೋಹಣ ಮಾಡಿದ್ದಾರೆ" ಎಂದು ಬಿಸಿಸಿಐ ಟ್ವೀಟ್‌ನಲ್ಲಿ ಬರೆದುಕೊಂಡಿದೆ.