ಹೈದರಾಬಾದ್:ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಹಿಡಿತ ಸಾಧಿಸಿದ್ದು, ಮೊದಲ ಇನ್ನಿಂಗ್ಸ್ನಲ್ಲೇ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಹಾಗೂ ಆಲ್ರೌಂಡರ್ ರವೀಂದ್ರ ಜಡೇಜಾ ಶತಕ ಸಿಡಿಸಿ ಮಿಂಚಿದ್ದಾರೆ. ಇವರ ಆಟಕ್ಕೆ ಈಗಾಗಲೇ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದು, ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟರ್ ಎಬಿ ಡಿವಿಲಿಯರ್ಸ್ ಕೂಡ ಟ್ವೀಟ್ ಮಾಡಿ, ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ನಲ್ಲಿ ಇಂಗ್ಲೆಂಡ್ ವಿರುದ್ಧ ಮರು ನಿಗಿದಿಯಾಗಿರುವ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕಣಕ್ಕಿಳಿದಿದ್ದು, ಮೊದಲ ಇನ್ನಿಂಗ್ಸ್ನಲ್ಲಿ 98 ರನ್ಗಳಿಸುವಷ್ಟರಲ್ಲಿ ಪ್ರಮುಖ ಐದು ವಿಕೆಟ್ ಕಳೆದುಕೊಂಡಿದ್ದ ವೇಳೆ ಒಂದಾದ ಪಂತ್ - ಜಡೇಜಾ ಜೋಡಿ ದಾಖಲೆಯ 222ರನ್ಗಳ ಜೊತೆಯಾಟವಾಡಿತು. ಜೊತೆಗೆ ಇಬ್ಬರು ಶತಕ ಸಿಡಿಸಿ ಮಿಂಚಿದ್ದಾರೆ. ಇವರ ಆಟಕ್ಕೆ ಫಿದಾ ಆಗಿರುವ ಎಬಿಡಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.