ನವದೆಹಲಿ: ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮುಖ್ಯಸ್ಥ ಜಯ್ ಶಾ ಅವರು ಆಫ್ರೋ-ಏಷ್ಯನ್ ಕ್ರಿಕೆಟ್ ಪ್ರಾಜೆಕ್ಟ್ ಅನ್ನು ಮತ್ತೆ ಪ್ರಾರಂಭಿಸಲು ಉತ್ಸುಕರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ವಾಣಿಜ್ಯಿಕವಾಗಿ ಮತ್ತು ಆರ್ಥಿಕವಾಗಿ ಕಾರ್ಯಸಾಧ್ಯವಾದ ಮತ್ತು ತಾಂತ್ರಿಕವಾಗಿ ಸಮರ್ಥನೀಯವಾದ ಮಾದರಿಯನ್ನು ಪ್ರಸ್ತಾಪಿಸಿದ್ದಾರೆ.
ಆಫ್ರೋ-ಏಷ್ಯನ್ ಕ್ರಿಕೆಟ್ ಪ್ರಾಜೆಕ್ಟ್ ತಳಮಟ್ಟದಲ್ಲಿ ಕ್ರಿಕೆಟ್ ಅಭಿವೃದ್ಧಿಗೆ ಸಹಕರಿಸುತ್ತದೆ. ಅರ್ಹತೆ ಪಡೆಯುವ ಮೂಲಕ 16 ವರ್ಷದೊಳಗಿನ, 19 ವರ್ಷದೊಳಗಿನ ಮತ್ತು 23 ವರ್ಷದೊಳಗಿನವರ ಪಂದ್ಯಗಳಲ್ಲಿ ಹೆಚ್ಚಿನ ಅವಕಾಶಗಳನ್ನು ನೀಡಲು ಯೋಜನೆ ರೂಪಿಸಲಾಗಿದೆ. ತರಬೇತುದಾರರು ಆಟಗಾರರಿಗೆ ಮಾರ್ಗದರ್ಶನ ನೀಡುತ್ತಾರೆ. ಈ ಮೂಲಕ ಆಫ್ರೋ ಏಷ್ಯಾದ ಭಾಗದಲ್ಲಿ ಹೆಚ್ಚಿನ ಆಟಗಾರರ ಕೌಶಲ್ಯ ಪರೀಕ್ಷಿಸಲು ಸಾಧ್ಯವಾಗುತ್ತದೆ ಎಂದು ಜಯ್ ಶಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.