ಅಬುಧಾಬಿ: ಸೂಪರ್ 12ನ ಎರಡನೇ ಗುಂಪಿನಲ್ಲಿ ಸೆಮಿಫೈನಲ್ ಪ್ರವೇಶಿಸಲು ನಿರ್ಣಾಯಕವಾಗಿರುವ ನ್ಯೂಜಿಲ್ಯಾಂಡ್ ಪಂದ್ಯದಲ್ಲಿ ಅಫ್ಘಾನಿಸ್ತಾನ ನಾಯಕ ಮೊಹಮ್ಮದ್ ನಬಿ ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಅಂಕಪಟ್ಟಿಯಲ್ಲಿ ನ್ಯೂಜಿಲ್ಯಾಂಡ್ 2ನೇ ಸ್ಥಾನದಲ್ಲಿದೆ. ಅಫ್ಘಾನಿಸ್ತಾನ ತಂಡದ 4 ನೇ ಸ್ಥಾನದಲ್ಲಿದ್ದು, ಇಂದಿನ ಪಂದ್ಯವನ್ನು ಗೆದ್ದರೆ ಸೆಮಿಫೈನಲ್ ಆಸೆ ಜೀವಂತವಾಗಿರಲಿದೆ. ಮತ್ತು ಭಾರತಕ್ಕೂ ಕೊನೆಯ ಅವಕಾಶ ಸಿಗಲಿದೆ. ಒಂದು ವೇಳೆ ನ್ಯೂಜಿಲ್ಯಾಂಡ್ ತಂಡ ಜಯಿಸಿದರೆ ಸೂಪರ್ 12ನ 2ನೇ ಗುಂಪಿನಲ್ಲಿ ಪಾಕಿಸ್ತಾನ ಜೊತೆಗೆ ಸೆಮಿಫೈನಲ್ ಪ್ರವೇಶಿಸಲಿದೆ.
ಕಿವೀಸ್ ಈಗಾಗಲೇ ಬಲಿಷ್ಠ ಭಾರತ ಸೇರಿದಂತೆ ನಮೀಬಿಯಾ, ಸ್ಕಾಟ್ಲೆಂಡ್ ವಿರುದ್ಧ ಜಯ ಸಾಧಿಸಿದ ವಿಶ್ವಾಸದಲ್ಲಿದೆ. ಇದೀಗ ವಿಶ್ವಶ್ರೇಷ್ಠ ಸ್ಪಿನ್ ಬೌಲರ್ಗಳನ್ನು ಹೊಂದಿರುವ ಅಫ್ಘಾನಿಸ್ತಾನದ ವಿರುದ್ಧ ನಿರ್ಣಾಯಕ ಪಂದ್ಯವನ್ನು ಗೆದ್ದು 3ನೇ ಬಾರಿಗೆ ಸೆಮಿಫೈನಲ್ ಪ್ರವೇಶಿಸಲು ಎದುರು ನೋಡುತ್ತಿದೆ.