ಅಬುಧಾಬಿ: ಭಾರತದ ವಿರುದ್ಧದ ಸೆಮಿಫೈನಲ್ ನಿರ್ಧರಿಸುವ ನಿರ್ಣಾಯಕ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ನಾಯಕ ಮೊಹಮ್ಮದ್ ನಬಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಅಫ್ಘಾನಿಸ್ತಾನ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕಿಳಿಯುತ್ತಿದೆ. ಭಾರತ ಎರಡು ಬದಲಾವಣೆ ಮಾಡಿಕೊಂಡಿದ್ದು, ಇಶಾನ್ ಕಿಶನ್ ಬದಲಿಗೆ ಸೂರ್ಯಕುಮಾರ್ ಯಾದವ್ ಮತ್ತು ವರುಣ್ ಚಕ್ರವರ್ತಿ ಬದಲಿಗೆ ರವಿಚಂದ್ರನ್ ಅಶ್ವಿನ್ 11ರ ಬಳಗದಲ್ಲಿ ಅವಕಾಶ ಪಡೆದಿದ್ದಾರೆ.
ಅಫ್ಘಾನಿಸ್ತಾನ (ಪ್ಲೇಯಿಂಗ್ XI): ಹಜರತುಲ್ಲಾ ಝಾಜೈ, ಮೊಹಮ್ಮದ್ ಶಹಜಾದ್(ವಿಕೀ), ರಹಮಾನುಲ್ಲಾ ಗುರ್ಬಜ್, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ(ನಾಯಕ), ಗುಲ್ಬದಿನ್ ನೈಬ್, ಶರಫುದ್ದೀನ್ ಅಶ್ರಫ್, ರಶೀದ್ ಖಾನ್, ಕರೀಂ ಜನತ್, ನವೀನ್-ಉಲ್-ಹಕ್, ಹಮೀದ್ ಹಸನ್
ಭಾರತ (ಪ್ಲೇಯಿಂಗ್ XI): ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ(ನಾಯಕ), ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ