ಕರ್ನಾಟಕ

karnataka

ETV Bharat / sports

ಏಕದಿನ​ ವಿಶ್ವಕಪ್‌ನಲ್ಲಿ ಎಲ್ಲ ದೊಡ್ಡ ತಂಡಗಳು ಭಾಗಿ: ಪಾಕ್​ಗೆ ಅನುರಾಗ್ ಠಾಕೂರ್ ಟಕ್ಕರ್​ - ಪಿಸಿಬಿಗೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಟಕ್ಕರ್​

ಏಷ್ಯಾ ಕಪ್‌ ಕ್ರಿಕೆಟ್‌ಗೆ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ತೆರಳುವುದಿಲ್ಲ ಎಂಬ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆಗೆ ಪಾಕ್‌ ಅಸಮಾಧಾನ ವ್ಯಕ್ತಪಡಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಪಾಕ್ ಕ್ರಿಕೆಟ್‌ ಬೋರ್ಡ್‌, ಇದು ವಿಶ್ವಕಪ್​ಗೆ ಪಾಕ್ ತಂಡ ಭಾರತಕ್ಕೆ ಪ್ರವಾಸ ಕೈಗೊಳ್ಳುವ ಮೇಲೂ ಪರಿಣಾಮ ಬೀರಬಹುದು ಎಂದು ಹೇಳಿತ್ತು. ಇದೀಗ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಟಕ್ಕರ್​ ಕೊಟ್ಟಿದ್ದಾರೆ.

all-big-teams-will-participate-in-odi-world-cup-in-india-thakur-after-pak-response
ಏಕದಿನ​ ವಿಶ್ವಕಪ್‌ನಲ್ಲಿ ಎಲ್ಲ ದೊಡ್ಡ ತಂಡಗಳು ಭಾಗಿ: ಪಾಕ್​ಗೆ ಅನುರಾಗ್ ಠಾಕೂರ್ ಟಕ್ಕರ್​

By

Published : Oct 20, 2022, 4:27 PM IST

ನವದೆಹಲಿ: ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್​ ವಿಶ್ವಕಪ್‌ನಲ್ಲಿ ಎಲ್ಲ ದೊಡ್ಡ ತಂಡಗಳು ಭಾಗವಹಿಸಲಿವೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಗುರುವಾರ ಹೇಳಿದ್ದಾರೆ. ಇದೇ ವೇಳೆ ಪಾಕಿಸ್ತಾನದಲ್ಲಿ ನಡೆಯುವ ಏಷ್ಯಾ ಕಪ್‌ಗಾಗಿ ಭಾರತ ಕ್ರಿಕೆಟ್ ತಂಡ ಪ್ರಯಾಣಿಸುವ ಬಗ್ಗೆ ಗೃಹ ಸಚಿವಾಲಯ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

ಮುಂದಿನ ವರ್ಷ ಪಾಕಿಸ್ತಾನದಲ್ಲಿ ಆಯೋಜಿಸಿರುವ ಏಷ್ಯಾ ಕಪ್‌ಗೆ ಟೀಂ ಇಂಡಿಯಾದ ತೆರಳುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಇತ್ತೀಚೆಗೆ ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕ್ರಿಕೆಟ್​ ಮಂಡಳಿ (ಪಿಸಿಬಿ)ಯು, ಏಕದಿನ ವಿಶ್ವಕಪ್​ಗಾಗಿ ಭಾರತಕ್ಕೆ ಪಾಕಿಸ್ತಾನ ತೆರಳುವುದರ ಮೇಲೂ ಇದು ಪರಿಣಾಮ ಬೀರಬಹುದು ಎಂದು ಹೇಳಿದೆ.

ಇದನ್ನೂ ಓದಿ:'ಏಷ್ಯಾ ಕಪ್​ ಆಡಲು ಪಾಕಿಸ್ತಾನಕ್ಕೆ ಬರುವುದಿಲ್ಲ ಎಂಬ ಏಕಪಕ್ಷೀಯ ನಿರ್ಧಾರ ಸರಿಯಲ್ಲ'

ಇದರ ಬೆನ್ನಲ್ಲೇ ಕೇಂದ್ರ ಕ್ರೀಡಾ ಸಚಿವರಾದ ಅನುರಾಗ್ ಠಾಕೂರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ಏಕದಿನ ವಿಶ್ವಕಪ್​ನಲ್ಲಿ​​ ಎಲ್ಲ ದೊಡ್ಡ ತಂಡಗಳು ಪಾಲ್ಗೊಳ್ಳಲಿವೆ. ಯಾಕೆಂದರೆ, ಯಾವುದೇ ಕ್ರೀಡೆಯಲ್ಲಿ ಭಾರತವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಭಾರತವು ಕ್ರೀಡೆಗೆ ವಿಶೇಷವಾಗಿ ಕ್ರಿಕೆಟ್‌ಗೆ ಸಾಕಷ್ಟು ಕೊಡುಗೆ ನೀಡಿದೆ. ಹಾಗಾಗಿ, ಭಾರತದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಶ್ವಕಪ್​ ಅದ್ಧೂರಿ ಮತ್ತು ಐತಿಹಾಸಿಕವಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:2023ರ ಏಷ್ಯಾಕಪ್‌ : ಭಾರತ ತಂಡ ಪಾಕಿಸ್ತಾನಕ್ಕೆ ಹೋಗಲ್ಲ- ಜಯ್​ ಶಾ

ABOUT THE AUTHOR

...view details