ಕ್ಯಾನ್ಬೆರಾ, ಆಸ್ಟ್ರೇಲಿಯಾ: ಆ್ಯಶಸ್ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಿ, ಬೀಗುತ್ತಿರುವ ಆಸ್ಟ್ರೇಲಿಯಾ ಕ್ರಿಕೆಟ್ನಲ್ಲಿ ಮಹತ್ವದ ಬದಲಾವಣೆಗಳಾಗುತ್ತಿವೆ. ಆಸ್ಟ್ರೇಲಿಯಾ ಕ್ರಿಕೆಟ್ನ ಪುರುಷರ ತಂಡ ಮುಖ್ಯ ಕೋಚ್ ಸ್ಥಾನಕ್ಕೆ ಜಸ್ಟಿನ್ ಲ್ಯಾಂಗರ್ ರಾಜೀನಾಮೆ ನೀಡಿದ್ದು, ಈ ಸ್ಥಾನಕ್ಕೆ ಆ್ಯಂಡ್ರ್ಯೂ ಮೆಕ್ಡೊನಾಲ್ಡ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಕುರಿತು ಆಸ್ಟ್ರೇಲಿಯಾ ಕ್ರಿಕೆಟ್ ಮಾಹಿತಿ ನೀಡಿದ್ದು, ಜಸ್ಟಿನ್ ಲ್ಯಾಂಗರ್ ರಾಜೀನಾಮೆ ಅಂಗೀಕರಿಸಲಾಗಿದ್ದು, ಹಂಗಾಮಿ ಮುಖ್ಯ ಕೋಚ್ ಆಗಿ ಆ್ಯಂಡ್ರ್ಯೂ ಮೆಕ್ಡೊನಾಲ್ಡ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದೆ. ಈ ಮೂಲಕ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಹೊಣೆಯನ್ನು ಆ್ಯಂಡ್ರ್ಯೂ ಮೆಕ್ಡೊನಾಲ್ಡ್ ಹೊರಲಿದ್ದಾರೆ.