ನವದೆಹಲಿ:ಕ್ರೀಡಾ ಕ್ಷೇತ್ರದಲ್ಲಿ ಭಾರತ ವಿಶ್ವದಲ್ಲಿಯೇ ಶಕ್ತಿಶಾಲಿಯಾಗಿ ಬೆಳೆದಿದೆ. ಬೇರಾವುದೇ ದೇಶದ ಅಣತಿಯಂತೆ ನಾವು ನಡೆಯುವ ಅಗತ್ಯವಿಲ್ಲ. ನಮ್ಮನ್ನು ಯಾರೂ ಆಳಲು ಸಾಧ್ಯವಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದರು.
ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯುವ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಆಡದಿದ್ದರೆ, ಆ ದೇಶದಲ್ಲಿ ನಡೆಯುವ ಏಕದಿನ ವಿಶ್ವಕಪ್‌ನಲ್ಲಿ ಭಾಗವಹಿಸಲ್ಲ. ಹೇಗೆ ವಿಶ್ವಕಪ್ ಆಡಿಸ್ತೀರಾ ನೋಡೋಣ ಎಂದು ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ರಮೀಜ್ ರಾಜಾ ನೀಡಿದ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಗಳ ನಡುವಿನ ವಾಗ್ಯುದ್ಧಕ್ಕೆ ಪ್ರತಿಕ್ರಿಯಿಸಲೇಬೇಕಿದೆ. ಆದರೆ, ನಾವು ಸರಿಯಾದ ಸಮಯಕ್ಕಾಗಿ ಕಾಯುತ್ತಿದ್ದೇವೆ. ವಿಶ್ವ ಕ್ರೀಡೆಯಲ್ಲಿ ಭಾರತ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿದೆ. ಬೇರೆ ಯಾವುದೇ ದೇಶ ನಮ್ಮ ಮೇಲೆ ಅಧಿಕಾರ ಚಲಾಯಿಸಲು ಅಸಾಧ್ಯ ಎಂದು ಸಚಿವ ಅನುರಾಗ್ ಟಕ್ಕರ್ ಕೊಟ್ಟಿದ್ದಾರೆ.
ಇದಕ್ಕೂ ಮೊದಲು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು, ಮುಂದಿನ ವರ್ಷ ಏಕದಿನ ವಿಶ್ವಕಪ್‌ನಲ್ಲಿ ಎಲ್ಲಾ ದೇಶಗಳು ಭಾಗವಹಿಸಲಿವೆ. ಇದು ಬಿಸಿಸಿಐನ ಆಂತರಿಕ ವಿಚಾರವಾಗಿದ್ದು, ಇದನ್ನು ಸರಿಯಾದ ಕ್ರಮದಲ್ಲಿ ಬಗೆಹರಿಸಲಾಗುವುದು ಎಂದು ಹೇಳಿಕೆ ನೀಡಿದ್ದರು.
ಪಾಕ್ ಭಾರತ ಕ್ರಿಕೆಟ್ ಮಂಡಳಿ ನಡುವಿನ ವಾಗ್ವಾದವೇನು?:ಮುಂದಿನ ಏಷ್ಯಾಕಪ್ ಪಾಕಿಸ್ತಾನದಲ್ಲಿ ಆಯೋಜನೆಯಾಗಿದ್ದು, ಭಾರತ ಭದ್ರತಾ ಕಾರಣಗಳಿಗಾಗಿ ಅಲ್ಲಿಗೆ ಪಯಣಿಸಲು ಸಾಧ್ಯವಿಲ್ಲ. ತಟಸ್ಥ ಸ್ಥಳದಲ್ಲಿ ಟೂರ್ನಿ ಆಯೋಜಿಸಬೇಕು ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆ ನೀಡಿದ್ದರು. ಇದಕ್ಕೆ ಅಧಿಕೃತವಾಗಿ ಪ್ರತಿಕ್ರಿಯಿಸಿದ ಪಾಕ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ರಮೀಜ್ ರಾಜಾ, ಭಾರತ ಇಲ್ಲಿಗೆ ಆಡಲು ಬರದಿದ್ದರೆ, ನಾವು ಕೂಡ ಭಾರತದಲ್ಲಿ ನಡೆಯುವ ವಿಶ್ವಕಪ್‌ನಲ್ಲಿ ಭಾಗವಹಿಸುವುದಿಲ್ಲ ಎಂದಿದ್ದರು. ಇದು ಉಭಯ ಕ್ರಿಕೆಟ್ ಮಂಡಳಿಗಳ ಮಧ್ಯೆ ವಾಗ್ವಾದಕ್ಕೆ ಕಾರಣವಾಗಿದೆ.
ಓದಿ:ಏಷ್ಯಾಕಪ್ ಆಡಲು ಪಾಕ್ಗೆ ಬರದಿದ್ರೆ, ವಿಶ್ವಕಪ್ ಆಡಲು ಭಾರತಕ್ಕೆ ಬರಲ್ಲ: ರಮೀಜ್ ರಾಜಾ