ಅಡಿಲೇಡ್ :ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 2ನೇ ಆ್ಯಶಸ್ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದ ಇಂಗ್ಲೆಂಡ್ ತಂಡದ ನಾಯಕ ವರ್ಷದಲ್ಲಿ ಹೆಚ್ಚು ಟೆಸ್ಟ್ ರನ್ಗಳಿಸಿದ ಪಟ್ಟಿಯಲ್ಲಿ ಭಾರತದ ಲೆಜೆಂಡರಿ ಕ್ರಿಕೆಟಿಗರಾದ ಸುನೀಲ್ ಗವಾಸ್ಕರ್ ಮತ್ತು ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಅಡಿಲೇಡ್ನ ಡೇ ಅಂಡ್ ನೈಟ್ ಟೆಸ್ಟ್ ಪಂದ್ಯದ 3ನೇ ದಿನ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ 116 ಎಸೆತಗಳಲ್ಲಿ 7 ಬೌಂಡರಿ ಸಹಿತ 62 ರನ್ಗಳಿಸಿ ಔಟಾದರು. ಈ ಸಂದರ್ಭದಲ್ಲಿ ಅವರು 2021ರ ವರ್ಷದಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ 1600ರ ಗಡಿ ದಾಟುವ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ 1600ಕ್ಕೂ ಹೆಚ್ಚು ರನ್ಗಳಿಸಿದ ವಿಶ್ವದ 4ನೇ ಬ್ಯಾಟರ್ ಎನಿಸಿದರು.
ರೂಟ್ಗಿಂತಲೂ ಮೊದಲು ಪಾಕಿಸ್ತಾನದ ಮೊಹಮ್ಮದ್ ಯೂಸುಫ್ 1788 ರನ್, ವೆಸ್ಟ್ ಇಂಡೀಸ್ನ ಸರ್ ವಿವಿಯನ್ ರಿಚರ್ಡ್ಸ್ 1710 ರನ್, ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ 1656 ರನ್ಗಳಿಸಿ ರೂಟ್ಗಿಂತ ಮುಂದಿದ್ದಾರೆ. ಆದರೆ, ಜೋ ರೂಟ್ ಈ ವರ್ಷ ಇನ್ನೂ ಒಂದು ಟೆಸ್ಟ್ ಸೇರಿ ಒಟ್ಟು 3 ಇನ್ನಿಂಗ್ಸ್ ಬ್ಯಾಟಿಂಗ್ ಮಾಡಲು ಅವಕಾಶವಿದೆ. 173 ರನ್ಗಳಿಸಿದರೆ ವರ್ಷವೊಂದರಲ್ಲಿ ಅತಿ ಹೆಚ್ಚು ರನ್ಗಳಿಸಿದ ವಿಶ್ವ ದಾಖಲೆಗೆ ಪಾತ್ರರಾಗಲಿದ್ದಾರೆ.