ಲಂಡನ್: ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಮತ್ತು ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) 2021-22ರ ಪುರುಷರ ಮತ್ತು ಮಹಿಳಾ ಆ್ಯಶಸ್ ಸರಣಿಯನ್ನು ಆಸ್ಟ್ರೇಲಿಯಾದಲ್ಲಿ ನಡೆಸಲು ನಿರ್ಧರಿಸಿವೆ.
ಮೊದಲು ಪುರುಷರ ಆ್ಯಶಸ್ ಟೆಸ್ಟ್ ಸರಣಿ ನಡೆಯಲಿದ್ದು, ಡಿಸೆಂಬರ್ 8 ರಿಂದ ಮೊದಲ ಟೆಸ್ಟ್ ಆರಂಭವಾಗಲಿದೆ. ಡಿಸೆಂಬರ್ 8 ರಿಂದ 12 ರವರಗೆ ಮೊದಲ ಟೆಸ್ಟ್ ಬ್ರಿಸ್ಬೇನ್‌ನ ಗಬ್ಬಾದಲ್ಲಿ ನಡೆಯುತ್ತೆ. ಎರಡನೇ ಟೆಸ್ಟ್ ಡಿಸೆಂಬರ್ 16-20 ಅಡಿಲೇಡ್ನ ಓವಲ್‌ನಲ್ಲಿ ಹಗಲು-ರಾತ್ರಿ ಟೆಸ್ಟ್ ನಡೆಯಲಿದೆ. ಮೂರನೇ ಟೆಸ್ಟ್ ಡಿಸೆಂಬರ್ 26-30, ಹಾಗೂ ನಾಲ್ಕನೇ ಟೆಸ್ಟ್ ಜನವರಿ 5-9 ರ ವರಗೆ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿವೆ. ಅಂತಿಮ ಮತ್ತು ಐದನೇ ಟೆಸ್ಟ್ ಪಂದ್ಯ ಜನವರಿ 14-18 ರವರಗೆ ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.