ದುಬೈ:ಐಸಿಸಿ ಬುಧವಾರ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಭಾರತ ತಂಡದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 2ನೇ ಸ್ಥಾನ ಉಳಿಸಿಕೊಂಡಿದ್ದಾರೆ. ಬೌಲಿಂಗ್ ಜೊತೆಗೆ ಆಲ್ರೌಂಡರ್ ಶ್ರೇಯಾಂಕದಲ್ಲೂ ದ್ವಿತೀಯ ರ‍್ಯಾಂಕ್ ಪಡೆಯುವ ಮೂಲಕ 2021ಅನ್ನು ಅಂತ್ಯಗೊಳಿಸಿದ್ದಾರೆ.
ಮತ್ತೊಬ್ಬ ಆಲ್ರೌಂಡರ್ ರವೀಂದ್ರ ಜಡೇಜಾ 3ನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ ಮತ್ತು ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಕ್ರಮವಾಗಿ 5 ಮತ್ತು 7ನೇ ಸ್ಥಾನವನ್ನು ಉಳಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ. ರೋಹಿತ್ 797 ಮತ್ತು ಕೊಹ್ಲಿ 756 ಅಂಕಗಳನ್ನು ಹೊಂದಿದ್ದಾರೆ.
ಟೆಸ್ಟ್ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾದ ಮಾರ್ನಸ್ ಲಾಬುಶೇನ್(915), ಇಂಗ್ಲೆಂಡ್ ನಾಯಕ ಜೋ ರೂಟ್(900), ನ್ಯೂಜಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್(879) ಮತ್ತು ಸ್ಟೀವ್ ಸ್ಮಿತ್(877) ಕ್ರಮವಾಗಿ 3 ಮತ್ತು 4ನೇ ಸ್ಥಾನ ಪಡೆದಿದ್ದಾರೆ.