ಕರ್ನಾಟಕ

karnataka

ETV Bharat / sports

Asia Cup 2022​: ಪಾಕಿಸ್ತಾನದ ವಿರುದ್ಧ ಟಾಸ್​ ಗೆದ್ದ ಭಾರತ.. ಬೌಲಿಂಗ್​ ಆಯ್ಕೆ

ಏಪ್ಯಾ ಕಪ್​ ಕ್ರಿಕೆಟ್ ಹಣಾಹಣಿ ಭಾರತ ಪಾಕಿಸ್ತಾನ ಮಧ್ಯೆ ನಡೆಯುತ್ತಿದೆ. ಪಾಕಿಸ್ತಾನದ ವಿರುದ್ಧ ಭಾರತ ಟಾಸ್​ ಗೆದ್ದು ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.

Asia Cup 2022: India and Pakistan match
Asia Cup 2022​: ಪಾಕಿಸ್ತಾನದ ವಿರುದ್ಧ ಟಾಸ್​ ಗೆದ್ದ ಭಾರತ.. ಬೌಲಿಂಗ್​ ಆಯ್ಕೆ

By

Published : Aug 28, 2022, 7:09 PM IST

Updated : Aug 28, 2022, 7:43 PM IST

ದುಬೈ: ದುಬೈನಲ್ಲಿ ನಡೆಯುತ್ತಿರುವ ಏಪ್ಯಾ ಕಪ್​ ಕ್ರಿಕೆಟ್​ ಟೂರ್ನಿಯಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಟಾಸ್​ ಗೆದ್ದು ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ನಡೆಯುತ್ತಿದ್ದು, ತೀವ್ರ ಕುತೂಹಲ ಮೂಡಿಸಿದೆ. ಟೀಂ ಇಂಡಿಯಾದ ಪರ ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್.ರಾಹುಲ್, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಆರ್ಷದೀಪ್ ಸಿಂಗ್ ಕಣಕ್ಕಿಳಿದಿದ್ದಾರೆ.

ಪಾಕ್​ ಪರವಾಗಿ ಬಾಬರ್ ಆಜಂ (ನಾಯಕ), ಮೊಹಮ್ಮದ್ ರಿಜ್ವಾನ್, ಫಖರ್​ ಜಮಾನ್, ಇಫ್ತಿಕಾರ್ ಅಹ್ಮದ್, ಖುಷ್‌ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ನಸೀಂ ಶಾ, ಹ್ಯಾರಿಸ್ ರೌಫ್, ಶಾನವಾಜ್ ದಹಾನಿ ಹಾಗೂ ಮೊಹಮ್ಮದ್ ನವಾಜ್​ ಇದ್ದಾರೆ.

ಇನ್ನು, ಟಿ-20 ಕ್ರಿಕೆಟ್​ನಲ್ಲಿ ಭಾರತದ ವಿರಾಟ್ ಕೊಹ್ಲಿ 100ನೇ ಪಂದ್ಯವಾಡಲಿದ್ದಾರೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಮೂರು ಮಾದರಿಗಳಲ್ಲಿಯೂ ನೂರು ಪಂದ್ಯಗಳನ್ನಾಡಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

ಇದನ್ನೂ ಓದಿ:ಏಷ್ಯಾ ಕಪ್‌ ಕ್ರಿಕೆಟ್‌ನಲ್ಲಿಂದು ರೋಚಕ ಕದನಕ್ಕೆ ಭೂಮಿಕೆ ಸಿದ್ಧ: ಭಾರತ-ಪಾಕ್ ಪಂದ್ಯದತ್ತ ಎಲ್ಲರ ಚಿತ್ತ

Last Updated : Aug 28, 2022, 7:43 PM IST

ABOUT THE AUTHOR

...view details