ದುಬೈ:15ನೇ ಆವೃತ್ತಿಯ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಪ್ರಶಸ್ತಿಗಾಗಿ ಶ್ರೀಲಂಕಾ ಮತ್ತು ಪಾಕಿಸ್ತಾನ ಸೆಣಸಾಡುತ್ತಿವೆ. ಟಾಸ್ ಗೆದ್ದಿರುವ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿದೆ. ದುಬೈ ಕ್ರೀಡಾಂಗಣದಲ್ಲಿ ಈವರೆಗೂ ಎರಡನೇ ಅವಧಿ ಬ್ಯಾಟ್ ಮಾಡಿದ ತಂಡ ಹೆಚ್ಚು ಗೆಲುವು ಸಾಧಿಸಿದೆ. ಈ ಕಾರಣಕ್ಕಾಗಿ ಪಾಕಿಸ್ತಾನ ಬೌಲಿಂಗ್ ಆಯ್ಕೆ ಮಾಡಿದೆ.
ಶ್ರೀಲಂಕಾ 6 ನೇ ಟ್ರೋಫಿ ಮೇಲೆ ಕಣ್ಣಿಟ್ಟಿದ್ದರೆ, 10 ವರ್ಷಗಳ ಬಳಿಕ ಪಾಕಿಸ್ತಾನ 3 ನೇ ಪ್ರಶಸ್ತಿ ಗೆಲ್ಲಲು ಕಣಕ್ಕಿಳಿಯಲಿದೆ.
ತಂಡಗಳು ಇಂತಿವೆ- ಶ್ರೀಲಂಕಾ:ಪಾತುಮ್ ನಿಸ್ಸಂಕಾ, ಕುಶಾಲ್ ಮೆಂಡಿಸ್, ದನುಷ್ಕ ಗುಣತಿಲಕ, ಧನಂಜಯ ಡಿ ಸಿಲ್ವಾ, ಬನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಪ್ರಮೋದ್ ಮದುಶನ್, ಮಹೇಶ್ ತೀಕ್ಷಣ, ದಿಲ್ಶನ್ ಮಧುಶಂಕ.
ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್, ಬಾಬರ್ ಆಜಂ (ನಾಯಕ), ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಆಸಿಫ್ ಅಲಿ, ಹ್ಯಾರಿಸ್ ರೌಫ್, ನಸೀಮ್ ಶಾ, ಮೊಹಮ್ಮದ್ ಹಸನೇನ್.
ಓದಿ:ಯಾರ ಪಾಲಿಗೆ ಏಷ್ಯಾ ಕಪ್?: ಪಾಕಿಸ್ತಾನ- ಶ್ರೀಲಂಕಾ ಮಧ್ಯೆ ಇಂದು ಹಣಾಹಣಿ