ಬ್ರಿಡ್ಜ್‌ಟೌನ್: ಮೂರು ಪಂದ್ಯಗಳ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ವೆಸ್ಟ್ ಇಂಡೀಸ್ ವಿರುದ್ಧ ಆರು ವಿಕೆಟ್‌ಗಳ ಗೆಲುವು ಸಾಧಿಸಿದೆ. ಮ್ಯಾಥ್ಯೂ ವೇಡ್ ತಮ್ಮ 11ನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದು, 52 ಎಸೆತಗಳಲ್ಲಿ 51 ರನ್ ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ODI Match: ವಿಂಡೀಸ್ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದ ಆಸ್ಟ್ರೇಲಿಯಾ - Australia Cricket News
ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ಸರಣಿಯ ನಿರ್ಣಾಯಕ ಆಟದಲ್ಲಿ ಆಸ್ಟ್ರೇಲಿಯಾ ತಂಡ ಆರು ವಿಕೆಟ್‌ಗಳ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ಕಿರಾನ್ ಪೊಲಾರ್ಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದರು. ಬಳಿಕ 31 ಓವರ್ನಲ್ಲಿ ತನ್ನೆಲ್ಲಾ ವಿಕೆಟ್ಗಳನ್ನು ಕಳೆದುಕೊಂಡು 152 ರನ್ ಗಳಿಸಿ ಆಸ್ಟೇಲಿಯಾಗೆ 153 ರನ್ಗಳ ಟಾರ್ಗೆಟ್ ನೀಡಿದರು. ಇನ್ನು ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ 4 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿ ಜಯ ಸಾಧಿಸಿತು.
ಕೊರೊನಾ ಪ್ರೋಟೋಕಾಲ್‌ಗಳ ಕಾರಣದಿಂದಾಗಿ ಎರಡನೇ ಪಂದ್ಯವನ್ನು ಎರಡು ದಿನಗಳವರೆಗೆ ಮುಂದೂಡಲಾಗಿತ್ತು. ಹೀಗಾಗಿ ಕಳೆದ ಶನಿವಾರ ತಂಡದ ಎಲ್ಲ ಸದಸ್ಯರು ಮತ್ತು ಸಿಬ್ಬಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ನೆಗೆಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಪಂದ್ಯ ನಡೆಸಲಾಗಿತ್ತು.