ಸೇಂಟ್ ಲೂಸಿಯಾ:ಆಸ್ಟ್ರೇಲಿಯಾದ ಸೀಮಿತ ಓವರ್ಗಳ ತಂಡದ ನಾಯಕ ಆ್ಯರೋನ್ ಫಿಂಚ್ ಮಂಡಿ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ, ವಿಂಡೀಸ್ ವಿರುದ್ಧದ ಸರಣಿ ಮತ್ತು ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ.
ಶನಿವಾರ ವೆಸ್ಟ್ ಇಂಡೀಸ್ನಿಂದ ಹೊರಬಂದಿರುವ ಫಿಂಚ್, 14 ದಿನಗಳ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಕ್ವಾರಂಟೈನ್ ಮುಗಿದ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ.
ಫಿಂಚ್ ಗಾಯ ಕ್ರಿಕೆಟ್ ಆಸ್ಟ್ರೇಲಿಯಾಕ್ಕೆ ದೊಡ್ಡ ತಲೆನೋವಾಗಿದೆ. ಆದರೂ ಯುಎಇನಲ್ಲಿ ಅಕ್ಟೋಬರ್ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ವೇಳೆಗೆ ಫಿಂಚ್ ಸಂಪೂರ್ಣ ಗುಣಮುಖರಾಗುತ್ತಾರೆ ಎಂಬ ವಿಶ್ವಾಸದಲ್ಲಿ ಬೋರ್ಡ್ ಮತ್ತು ಆಯ್ಕೆಗಾರರಿದ್ದಾರೆ.