ಮೆಲ್ಬರ್ನ್(ಆಸ್ಟ್ರೇಲಿಯಾ):ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಕೋವಿಡ್ ಸೋಂಕಿತ ವ್ಯಕ್ತಿಯ ಸಂಪರ್ಕದಿಂದಾಗಿ ಇಲ್ಲಿ ನಡೆಯುತ್ತಿರುವ ಆ್ಯಷಸ್ ಟೆಸ್ಟ್ ಸರಣಿಯ 2ನೇ ಪಂದ್ಯದಿಂದ ಹೊರಗುಳಿಯಬೇಕಾಗಿದೆ. ಹೀಗಾಗಿ ಕಮಿನ್ಸ್ ಬದಲಾಗಿ ಮೈಕೆಲ್ ನೇಸರ್ ತಂಡದಲ್ಲಿ ಸ್ಥಾನ ಪಡೆದುಕೊಳ್ಳಲಿದ್ದಾರೆ.
ಬುಧವಾರದಂದು ಟೆಸ್ಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಊಟಕ್ಕೆಂದು ಹೊರಗಡೆ ಹೋಗಿದ್ದರು. ಈ ವೇಳೆ ಅವರು ಕೋವಿಡ್ ಸೋಂಕಿತನ ಸಂಪರ್ಕಕ್ಕೆ ಬಂದಿದ್ದು, 7 ದಿನ ಕ್ವಾರಂಟೈನ್ ಮಾಡಲಾಗುವುದು. ಇದರಿಂದ ಇಂಗ್ಲೆಂಡ್ ವಿರುದ್ಧದ 2 ನೇ ಪಂದ್ಯಕ್ಕೆ ಸ್ಟೀವನ್ ಸ್ಮಿತ್ ನಾಯಕತ್ವ ವಹಿಸಲಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ.