ಬೆಂಗಳೂರು:ಆಲ್ರೌಂಡರ್ ಅಕ್ಷರ್ ಪಟೇಲ್ ಗಾಯದಿಂದ ಚೇತರಿಸಿಕೊಂಡು ಬಂದಿರುವುದರಿಂದ ರಿಸ್ಟ್ ಸ್ಪಿನ್ನರ್ ಕುಲ್ದೀಪ್ ಯಾದವ್ರನ್ನು ಭಾರತ ತಂಡದಿಂದ ಬಿಡುಗಡೆ ಮಾಡಲಾಗಿದೆ.
ಅಕ್ಷರ್ ಪಟೇಲ್ ಕಣಕಾಲಿನ ಗಾಯಕ್ಕೆ ತುತ್ತಾಗದ್ದರಿಂದ ದಕ್ಷಿಣ ಆಫ್ರಿಕಾ ಪ್ರವಾಸ ಮತ್ತು ತವರಿನಲ್ಲಿ ನಡೆದ ಟಿ20 ಸರಣಿಗಳಲ್ಲಿ ಆಡುವ ಅವಕಾಶ ತಪ್ಪಿಸಿಕೊಂಡಿದ್ದರು. ಅಲ್ಲದೆ ವಿಂಡೀಸ್ ಸರಣಿಗೂ ಮುನ್ನ ಅವರು ಕೋವಿಡ್ ಸೋಂಕಿಗೂ ತುತ್ತಾಗಿದ್ದರು.
ಅಕ್ಷರ್ ನಮ್ಮ ಮೊದಲ ಆಯ್ಕೆಯಾಗಿದ್ದಾರೆ, ಅವರು ಗಾಯದಿಂದ ಚೇತರಿಸಿಕೊಳ್ಳುತ್ತಿದ್ದ ಕಾರಣಕ್ಕಾಗಿ ಕುಲ್ದೀಪ್ ಅವರನ್ನು ಹೆಚ್ಚುವರಿ ಆಟಗಾರನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ಅಕ್ಷರ್ ಫಿಟ್ ಆಗಿ ಮರಳಿದ್ದಾರೆ. ಆದ್ದರಿಂದ ಕುಲ್ದೀಪ್ ಯಾದವ್ರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ ಎಂದು ಬಿಸಿಸಿಐ ಮೂಲ ತಿಳಿಸಿದೆ.