ದುಬೈ:ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಅಲಿಸಾ ಹೀಲಿ ಏಪ್ರಿಲ್ ತಿಂಗಳ ಐಸಿಸಿ ಪ್ಲೇಯರ್ ಆಫ್ ದ ಮಂತ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬಾಬರ್ ದಕ್ಷಿಣ ಆಫ್ರಿಕಾ ವಿರುದ್ಧ ಇತ್ತೀಚೆಗೆ ಮುಗಿದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದರು. ಅವರು ಏಕದಿನ ಕ್ರಿಕೆಟ್ನಲ್ಲಿ 786 ಸರಾಸರಿಯಲ್ಲಿ 228 ರನ್, 7 ಟಿ-20 ಪಂದ್ಯಗಳಿಂದ 43ರ ಸರಾಸರಿಯಲ್ಲಿ 305 ರನ್ ಮತ್ತು ಏಕದಿನ ಕ್ರಿಕೆಟ್ನಲ್ಲಿ ನಂಬರ್ 1 ಬ್ಯಾಟ್ಸ್ಮನ್ ಪಟ್ಟ ಪಡೆದಿದ್ದರು. ಅದಕ್ಕಾಗಿ ಅವರು ಏಪ್ರಿಲ್ನ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದಿದ್ದಾರೆ.