ಲೀಡ್ಸ್(ಇಂಗ್ಲೆಂಡ್):ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ನಲ್ಲಿ ಟೀಂ ಇಂಡಿಯಾ ಸೋಲಿನ ಸುಳಿಗೆ ಸಿಲುಕಿಕೊಂಡಿದೆ. ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 78ರನ್ಗಳಿಗೆ ತಂಡ ಆಲೌಟ್ ಆಗಿದ್ದು, ಇದೀಗ ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ನಡೆಸುತ್ತಿದೆ.
ಎರಡನೇ ಇನ್ನಿಂಗ್ಸ್ನಲ್ಲೂ ಆರಂಭಿಕ ಆಘಾತಕ್ಕೊಳಗಾಗಿರುವ ಟೀಂ ಇಂಡಿಯಾ ಆರಂಭದಲ್ಲೇ ಕನ್ನಡಿಗ ಕೆ.ಎಲ್ ರಾಹುಲ್ ವಿಕೆಟ್ ಕಳೆದುಕೊಂಡಿದೆ. ಕೇವಲ 8ರನ್ಗಳಿಕೆ ಮಾಡಿದ್ದ ಸಂದರ್ಭದಲ್ಲಿ ಓವರ್ಟೊನ್ ಎಸೆದ ಓವರ್ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಸ್ಲೀಪ್ನಲ್ಲಿ ನಿಂತಿದ್ದ ಬೈರ್ಸ್ಟೋವ್ ಸ್ಟನ್ನಿಂಗ್ ಕ್ಯಾಚ್ ಹಿಡಿಯುವಲ್ಲಿ ಯಶಸ್ವಿಯಾದರು.