ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆಯೋಜನೆಗೊಂಡಿರುವ ಐಸಿಸಿ ಟಿ - 20 ವಿಶ್ವಕಪ್ಗಾಗಿ 15 ಸದಸ್ಯರನ್ನೊಳಗೊಂಡ ಭಾರತೀಯ ತಂಡ ಪ್ರಕಟಗೊಂಡಿದ್ದು, ವಿರಾಟ್ ಕೊಹ್ಲಿ ತಂಡವನ್ನ ಮುನ್ನಡೆಸಲಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಉಪಾಧ್ಯಕ್ಷ ರಾಜೀವ್ ಶುಕ್ಲಾ ಟಿ-20 ವಿಶ್ವಕಪ್ 2021ಕ್ಕೆ 'ಸಮತೋಲಿತ ತಂಡ'ವನ್ನು ಆಯ್ಕೆ ಮಾಡಲಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.