ಮೌಂಗನುಯಿ: ಭಾರತ, ಪಾಕಿಸ್ತಾನ, ಇಂಗ್ಲೆಂಡ್ನಂತಹ ಬಲಿಷ್ಠ ತಂಡಗಳಿಗೆ ಸೋಲುಣಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಆಗಿರುವ ನ್ಯೂಜಿಲ್ಯಾಂಡ್ ತಂಡಕ್ಕೆ ತವರಿನಲ್ಲಿ ಬಾಂಗ್ಲಾದೇಶ ತಂಡದ ವಿರುದ್ಧ ಹಿನ್ನಡೆ ಅನುಭವಿಸಿದೆ.
ಬೇ ಓವಲ್ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಟಿಮ್ ಸೌಥಿ, ಟ್ರೆಂಟ್ ಬೌಲ್ಟ್, ಜೇಮಿಸನ್ ವ್ಯಾಗ್ನರ್ ಅಂತಹ ವಿಶ್ವ ಶ್ರೇಷ್ಠ ಬೌಲರ್ಗಳಿಗೆ ಟಕ್ಕರ್ ನೀಡಿ ಬರೋಬ್ಬರಿ 458 ರನ್ ದಾಖಲಿಸಿದ್ದಲ್ಲದೆ, ಆತಿಥೇಯ ತಂಡದ ವಿರುದ್ಧ 130 ರನ್ಗಳ ಇನ್ನಿಂಗ್ಸ್ ಮುನ್ನಡೆ ಪಡೆದುಕೊಂಡಿದೆ. ಆಶ್ಚರ್ಯ ಎಂದರೆ ಭಾರತ ಮತ್ತು ಪಾಕಿಸ್ತಾನ ತಂಡಗಳು ತಲಾ ಎರಡೂ ಟೆಸ್ಟ್ ಪಂದ್ಯಗಳನ್ನಾಡಿದ್ದರೂ ಒಮ್ಮೆಯೂ 300 ರ ಗಡಿ ದಾಟಿರಲಿಲ್ಲ. ಆದರೆ, ಬಾಂಗ್ಲಾದೇಶ ಮೊದಲ ಪಂದ್ಯದಲ್ಲೇ ಕಿವೀಸ್ಗೆ ಆಘಾತ ನೀಡಿದೆ.