ಕರ್ನಾಟಕ

karnataka

ETV Bharat / sports

ಟೀಂ ಇಂಡಿಯಾದಿಂದ ದಕ್ಷಿಣ ಆಫ್ರಿಕಾ ಪ್ರವಾಸ.. ನಾಳೆ ಬಿಸಿಸಿಐನಿಂದ ಮಹತ್ವದ ನಿರ್ಧಾರ - ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ

ಟೆಸ್ಟ್​​​ ಹಾಗೂ ಸಿಮೀತ ಓವರ್​ಗಳ ಕ್ರಿಕೆಟ್​ ಟೂರ್ನಮೆಂಟ್​​ನಲ್ಲಿ ಭಾಗಿಯಾಗಲು ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಬೇಕಾಗಿದ್ದು, ಇದರ ಬಗ್ಗೆ ಭಾರತೀಯ ಕ್ರಿಕೆಟ್ ಮಂಡಳಿ ನಾಳೆ ಮಹತ್ವದ ನಿರ್ಧಾರ ಕೈಗೊಳ್ಳಲಿದೆ.

BCCI Annual General Meeting
BCCI Annual General Meeting

By

Published : Dec 3, 2021, 4:15 PM IST

ಕೋಲ್ಕತ್ತಾ: ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಕೋವಿಡ್​​ನ ಹೊಸ ರೂಪಾಂತರ ಒಮಿಕ್ರಾನ್​ ಎಲ್ಲ ದೇಶಗಳಲ್ಲೂ ಈಗಾಗಲೇ ಆತಂಕ ಮೂಡಿಸಿದೆ. ಈ ಹಿಂದಿನ ಸೋಂಕಿಗಿಂತಲೂ ಒಮಿಕ್ರಾನ್​ ವೇಗವಾಗಿ ಹರಡುವ ಸಾಧ್ಯತೆ ಇದೆ ಎಂಬ ಕಾರಣಕ್ಕಾಗಿ ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸದ ಮೇಲೆ ಕಾರ್ಮೋಡ ಮೂಡಿದೆ.

ಭಾರತೀಯ ಕ್ರಿಕೆಟ್ ಮಂಡಳಿ ನಾಳೆ 90ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಲಿದ್ದು, ಈ ವೇಳೆ ಟೀಂ ಇಂಡಿಯಾದ ದಕ್ಷಿಣ ಆಫ್ರಿಕಾ ಪ್ರವಾಸ ಸೇರಿದಂತೆ ಅನೇಕ ವಿಷಯಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಟೀಂ ಇಂಡಿಯಾ ಡಿಸೆಂಬರ್​​​ 9ರಂದು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಬೇಕಾಗಿದೆ. ಆದರೆ, ಹರಿಣಗಳ ನಾಡಿನಲ್ಲಿ ರೂಪಾಂತರ ಒಮಿಕ್ರಾನ್​​ ಹೆಚ್ಚಾಗಿ ಕಂಡು ಬಂದಿರುವ ಕಾರಣ, ಬಿಸಿಸಿಐ ನಾಳೆ ಮಹತ್ವದ ನಿರ್ಧಾರ ಕೈಗೊಳ್ಳಲಿದೆ.

ಇದನ್ನೂ ಓದಿರಿ:ಶೂನ್ಯಕ್ಕೆ ಔಟಾಗಿ ಅನಗತ್ಯ ದಾಖಲೆ ನಿರ್ಮಾಣ ಮಾಡಿದ ಕ್ಯಾಪ್ಟನ್​ ಕೊಹ್ಲಿ

ಇದೇ ವಿಚಾರವಾಗಿ ನಿನ್ನೆ ಮಾತನಾಡಿರುವ ವಿರಾಟ್​​ ಕೊಹ್ಲಿ, ಈ ವಿಚಾರವಾಗಿ ಈಗಾಗಲೇ ರಾಹುಲ್​ ಭಾಯ್​ ಬಿಸಿಸಿಐ ಜೊತೆ ಮಾತುಕತೆ ಆರಂಭಿಸಿದ್ದು, ಮುಂದಿನ ಎರಡು ದಿನಗಳಲ್ಲಿ ಪ್ರವಾಸದ ಬಗ್ಗೆ ಸಂಪೂರ್ಣವಾದ ಸ್ಪಷ್ಟತೆ ಸಿಗಲಿದೆ ಎಂದಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಟೀಂ ಇಂಡಿಯಾ ಮೂರು ಟೆಸ್ಟ್​​ ಪಂದ್ಯ, ಮೂರು ಏಕದಿನ ಹಾಗೂ ನಾಲ್ಕು ಟಿ-20 ಪಂದ್ಯಗಳಲ್ಲಿ ಭಾಗಿಯಾಗಲಿದೆ.

ABOUT THE AUTHOR

...view details