ಸೌತಾಂಪ್ಟನ್ : ನ್ಯೂಜಿಲ್ಯಾಂಡ್ ವಿರುದ್ಧ ಶುಕ್ರವಾರದಿಂದ ಆರಂಭವಾಗಲಿರುವ ವಿಶ್ವ ಟೆಸ್ಟ್ಚಾಂಪಿಯನ್ಶಿಪ್ ಫೈನಲ್ಗಾಗಿ ಬಿಸಿಸಿಐ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ಕನ್ನಡಿಗರಾದ ಮಯಾಂಕ್ ಅಗರ್ವಾಲ್ ಮತ್ತು ಕೆ ಎಲ್ ರಾಹುಲ್ರನ್ನು ತಂಡದಿಂದ ಕೈಬಿಟ್ಟಿರುವುದು ಆಶ್ಚರ್ಯ ತಂದಿದೆ.
ಜೂನ್ 18ರಿಂದ 22ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಈಗಾಗಲೇ ಕಿವೀಸ್ ತನ್ನ ಫೈನಲ್ ತಂಡವನ್ನು ಪ್ರಕಟಿಸಿದೆ. ಇದೀಗ ಮಂಗಳವಾರ ಬಿಸಿಸಿಐ ಕೂಡ ಫೈನಲ್ ಹಣಾಹಣಿಗೆ ತಂಡದ ತಂಡವನ್ನು ಘೋಷಣೆ ಮಾಡಿಕೊಂಡಿದೆ.
ಆರಂಭಿಕರಾಗಿ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಆರಂಭಿಕರಾಗಿ ಆಯ್ಕೆಯಾಗಿದ್ದಾರೆ. ಆದರೆ, ಇವರಿಗೆ ಬ್ಯಾಕ್ಅಪ್ ಓಪನರ್ ಆಗಿ ಯಾರನ್ನು ಆಯ್ಕೆ ಮಾಡಿಕೊಂಡಿಲ್ಲ. ಉಳಿದಂತೆ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಭ್ ಪಂತ್ ತಂಡದಲ್ಲಿದ್ದಾರೆ.