ಮುಂಬೈ:ದೇಶದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗುತ್ತಿದ್ದು, ಪ್ರತಿದಿನ ಸಾವಿರಾರು ಜನರು ಸಾವಿಗೀಡಾಗುತ್ತಿದ್ದಾರೆ. ಇದರ ಮಧ್ಯೆ ಐಸಿಸಿ ಟಿ-20 ವಿಶ್ವಕಪ್ ಟೂರ್ನಿ ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ಆಯೋಜನೆಗೊಂಡಿದೆ. ಒಂದೇ ವೇಳೆ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಬೇರೆ ಕಡೆ ಟೂರ್ನಿ ನಡೆಸಲು ಬಿಸಿಸಿಐ ಯೋಜನೆ ರೂಪಿಸಿದೆ.
ದೇಶದಲ್ಲಿ ಕೊರೊನಾ ಹೆಚ್ಚಳ ಮುಂದುವರಿದರೆ ಬಿಸಿಸಿಐ ಪ್ಲಾನ್ ಬಿ ಸಿದ್ಧಪಡಿಸಿದ್ದು, ದುಬೈನಲ್ಲಿ ಐಸಿಸಿ ಟಿ-20 ವಿಶ್ವಕಪ್ ಟೂರ್ನಿ ಆಯೋಜನೆ ಮಾಡಲು ಪ್ಲಾನ್ ಹಾಕಿಕೊಂಡಿದೆ ಎಂದು ತಿಳಿದು ಬಂದಿದೆ. ಕಳೆದ ವರ್ಷ ಕೋವಿಡ್ ವೈರಸ್ ಹೆಚ್ಚಾಗಿದ್ದ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ ದುಬೈನಲ್ಲಿ ನಡೆಸಿ, ಅದರಲ್ಲಿ ಯಶಸ್ವಿಯಾಗಿದೆ. ಇದೀಗ ವಿಶ್ವಕಪ್ ಕೂಡ ಅಲ್ಲೇ ನಡೆಸಲು ಯೋಜನೆ ಹಾಕಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.