ಕರ್ನಾಟಕ

karnataka

ETV Bharat / sports

ರಾಷ್ಟ್ರೀಯ ಆಯ್ಕೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ - ರಾಷ್ಟ್ರೀಯ ಆಯ್ಕೆಗಾರ

ರಾಷ್ಟ್ರೀಯ ಆಯ್ಕೆಗಾರರ (ಹಿರಿಯ ಪುರುಷರು) ಹುದ್ದೆಗೆ ಬಿಸಿಸಿಐ ಅರ್ಜಿಗಳನ್ನು ಆಹ್ವಾನಿಸಿದೆ.

bcci-invites-applications-for-the-position-of-national-selectors
ರಾಷ್ಟ್ರೀಯ ಆಯ್ಕೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ

By

Published : Nov 18, 2022, 11:08 PM IST

Updated : Nov 19, 2022, 6:04 AM IST

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ರಾಷ್ಟ್ರೀಯ ಆಯ್ಕೆಗಾರರ (ಹಿರಿಯ ಪುರುಷರು) ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಐದು ಹುದ್ದೆಗಳಿಗೆ ಬಿಸಿಸಿಐ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕೆಲ ಮಾನದಂಡಗಳನ್ನು ನಿಗದಿಪಡಿಸಿದೆ.

ಅಭ್ಯರ್ಥಿಗಳ ಮಾನದಂಡಗಳು:

1) ಕನಿಷ್ಠ 7 ಟೆಸ್ಟ್ ಪಂದ್ಯಗಳನ್ನು ಆಡಿರಬೇಕು; ಅಥವಾ

2) 30 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರಬೇಕು; ಅಥವಾ

3) 10 ಏಕದಿನ ಮತ್ತು 20 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರಬೇಕು.

ಜೊತೆಗೆ ಕನಿಷ್ಠ 5 ವರ್ಷಗಳ ಹಿಂದೆ ಆಟದಿಂದ ನಿವೃತ್ತರಾಗಿರಬೇಕು. ಒಟ್ಟು 5 ವರ್ಷಗಳ ಕಾಲ ಯಾವುದೇ ಕ್ರಿಕೆಟ್ ಸಮಿತಿಯ ಸದಸ್ಯರಾಗಿರುವ ಯಾವುದೇ ವ್ಯಕ್ತಿ ಪುರುಷರ ಆಯ್ಕೆ ಸಮಿತಿಯ ಸದಸ್ಯನಾಗಲು ಅರ್ಹರಾಗಿರುವುದಿಲ್ಲ. ಅರ್ಜಿ ಸಲ್ಲಿಸಲು ನವೆಂಬರ್ 28ರಂದು ಕೊನೆ ದಿನವಾಗಿದೆ.

Last Updated : Nov 19, 2022, 6:04 AM IST

ABOUT THE AUTHOR

...view details