ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ಪಂಜಾಬ್ ಸೇರಿದಂತೆ ಇತರೆ ದೇಶಿ ತಂಡದಲ್ಲಿ ಆಡಿದ್ದ ಬಿಪುಲ್ ಶರ್ಮಾ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಅವರು ಭವಿಷ್ಯದಲ್ಲಿ ಅಮೆರಿಕಾದಲ್ಲಿ ಕ್ರಿಕೆಟ್ ಆಡುವುದಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
25 ವರ್ಷಗಳ ಕಾಲ ಕ್ರಿಕೆಟ್ ಆಡಿರುವ 38 ವರ್ಷದ ಕ್ರಿಕೆಟರ್ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿ ಇದು ತಮ್ಮ ವೃತ್ತಿ ಜೀವನಕ್ಕೆ ತೆರೆ ಎಳೆಯಲು ಸಕಾಲ ಎಂದು ಬರೆದುಕೊಂಡಿದ್ದಾರೆ.
ಈ ಕ್ರಿಕೆಟ್ ಕ್ರೀಡೆಯಲ್ಲಿ ನನ್ನ ಪಯಣ ಗಮನಾರ್ಹವಾದದ್ದಾಗಿದೆ. ನನ್ನನ್ನು ನಿರಂತರವಾಗಿ ಬೆಂಬಲಿಸಿದ್ದಕ್ಕಾಗಿ ಕುಟುಂಬಕ್ಕೆ, ಕೋಚ್ಗಳಿಗೆ ಮತ್ತು ಹಿತೈಷಿಗಳ ಪ್ರೋತ್ಸಾಹಕ್ಕೆ ಧನ್ಯವಾದ ಅರ್ಪಿಸುತ್ತೇನೆ.
ನನಗೆ ಪ್ರತಿನಿಧಿಸಲು ಅವಕಾಶ ನೀಡಿದ ಪಂಜಾಬ್, ಹಿಮಾಚಲಪ್ರದೇಶ ಮತ್ತು ಸಿಕ್ಕಿಂ ಕ್ರಿಕೆಟ್ ಅಸೋಸಿಯೇಷನ್ಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಮ್ಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ.