ನವದೆಹಲಿ:ಡಿಸೆಂಬರ್ 5 ರಿಂದ 17 ಭಾರತದಲ್ಲಿ ನಡೆಯಲಿರುವ ಅಂಧರ ಟಿ-20 ವಿಶ್ವಕಪ್‌ನಲ್ಲಿ ಭಾಗವಹಿಸಲು ಪಾಕಿಸ್ತಾನದ 34 ಆಟಗಾರರಿಗೆ ಮತ್ತು ಅಧಿಕಾರಿಗಳಿಗೆ ವೀಸಾ ನೀಡಲು ಕೇಂದ್ರ ಗೃಹ ಸಚಿವಾಲಯ ಅನುಮೋದಿಸಿದೆ. ಅಂಧರ ವಿಶ್ವಕಪ್‌ನಲ್ಲಿ ಭಾಗವಹಿಸಲು ಪಾಕಿಸ್ತಾನದ 34 ಆಟಗಾರರು ಮತ್ತು ಅಧಿಕಾರಿಗಳಿಗೆ ವೀಸಾ ನೀಡಲು ಗೃಹ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅನುಮೋದನೆಗೂ ಮುನ್ನ ಪಾಕಿಸ್ತಾನ ಅಂಧರ ಕ್ರಿಕೆಟ್ ಮಂಡಳಿ, ಭಾರತ ವಿದೇಶಾಂಗ ಸಚಿವಾಲಯದಿಂದ ಪಾಕ್ ತಂಡಕ್ಕೆ ಅನುಮತಿ ಸಿಕ್ಕಿಲ್ಲ. ಈ ದುರದೃಷ್ಟಕರ ಘಟನೆಯಿಂದಾಗಿ ಪಾಕಿಸ್ತಾನದ ಅಂಧರ ಕ್ರಿಕೆಟ್ ತಂಡ ವಿಶ್ವಕಪ್ ಆಡಲು ಸಾಧ್ಯವಾಗುವುದಿಲ್ಲ. ತಾರತಮ್ಯದ ಕ್ರಮಕ್ಕಾಗಿ ವಿಶ್ವ ಅಂಧರ ಕ್ರಿಕೆಟ್ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.