ದುಬೈ :ಭಾರತ-ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯ ಮುಕ್ತಾಯವಾಗುತ್ತಿದ್ದಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ನೂತನ ಟೆಸ್ಟ್ ರ್ಯಾಂಕಿಂಗ್ ರಿಲೀಸ್ ಮಾಡಿದೆ. ಓವಲ್ ಟೆಸ್ಟ್ನಲ್ಲಿ ಗಮನಾರ್ಹ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಒಂದು ಸ್ಥಾನ ಏರಿಕೆ ಕಂಡು, 9ನೇ ಸ್ಥಾನಕ್ಕೆ ಲಗ್ಗೆ ಹಾಕಿದ್ದಾರೆ.
ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 4 ವಿಕೆಟ್ ಪಡೆದುಕೊಂಡು ಮಿಂಚಿರುವ ಬುಮ್ರಾ, ಎರಡನೇ ಇನ್ನಿಂಗ್ಸ್ನಲ್ಲಿ ಕ್ರಮವಾಗಿ ಒಲಿ ಪೋಪ್ ಹಾಗೂ ಬೈರ್ಸ್ಟೋವ್ ವಿಕೆಟ್ ಕಿತ್ತು ತಂಡಕ್ಕೆ ಮೆಲುಗೈ ತಂದುಕೊಟ್ಟಿದ್ದರು.
ಬ್ಯಾಟಿಂಗ್ ವಿಭಾಗದಲ್ಲಿ ಇಂಗ್ಲೆಂಡ್ ಕ್ಯಾಪ್ಟನ್ ಜೋ ರೂಟ್ 903 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ನ್ಯೂಜಿಲ್ಯಾಂಡ್ನ ಕೇನ್ ವಿಲಿಯಮ್ಸನ್ 901 ಅಂಕ 2ನೇ ಸ್ಥಾನ ಹಾಗೂ ಅಸ್ಟ್ರೇಲಿಯಾದ ಸ್ಮಿತ್ 891 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದ್ದಾರೆ. ಟೀಂ ಇಂಡಿಯಾದ ರೋಹಿತ್ ಶರ್ಮಾ 813 ಅಂಕಗಳೊಂದಿಗೆ 5ನೇ ಸ್ಥಾನ ಹಾಗೂ ವಿರಾಟ್ ಕೊಹ್ಲಿ 783 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದ್ದಾರೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ
ಬೌಲಿಂಗ್ ವಿಭಾಗದಲ್ಲಿ ನ್ಯೂಜಿಲ್ಯಾಂಡ್ನ ಪ್ಯಾಟ್ ಕಮ್ಮಿನ್ಸ್ 908 ಅಂಕಗಳೊಂದಿಗೆ ಮೊದಲ ಸ್ಥಾನ, 831 ಅಂಕ ಹೊಂದಿರುವ ಆರ್.ಅಶ್ವಿನ್ 2ನೇ ಸ್ಥಾನದಲ್ಲಿದ್ದಾರೆ. 10ನೇ ಸ್ಥಾನದಲ್ಲಿದ್ದ ಬುಮ್ರಾ ಏರಿಕೆ ಕಂಡಿದ್ದು, 771 ಅಂಕಗಳೊಂದಿಗೆ 9ನೇ ಸ್ಥಾನಕ್ಕೆ ಲಗ್ಗೆ ಹಾಕಿದ್ದಾರೆ.
ಆಲ್ರೌಂಡರ್ ವಿಭಾಗದಲ್ಲಿ ವೆಸ್ಟ್ ಇಂಡೀಸ್ನ ಹೋಲ್ಡರ್ 434 ಅಂಕಗಳೊಂದಿಗೆ ಮೊದಲ ಸ್ಥಾನ, 348 ಅಂಕ ಹೊಂದಿರುವ ಬೆನ್ ಸ್ಟೋಕ್ಸ್ 2ನೇ ಸ್ಥಾನ ಹಾಗೂ 338 ಅಂಕಗಳೊಂದಿಗೆ ಭಾರತದ ರವೀಂದ್ರ ಜಡೇಜಾ 3ನೇ ಸ್ಥಾನದಲ್ಲಿದ್ದಾರೆ.