ನವದೆಹಲಿ:ಮಂಗಳವಾರ ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಕ್ರೀಡಾಕ್ಷೇತ್ರಕ್ಕೆ ಕಳೆದ ವರ್ಷಕ್ಕಿಂತ ಹೆಚ್ಚುವರಿಯಾಗಿ 305.58 ಕೋಟಿ ರೂಗಳನ್ನು ಹಂಚಿಕೆ ಮಾಡಲಾಗಿದೆ. 2022-23ರ ಹಣಕಾಸಿ ವರ್ಷಕ್ಕೆ 3062.60 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.
2021-22ರ ಕೇಂದ್ರ ಬಜೆಟ್ನಲ್ಲಿ 2596.14 ಕೋಟಿ ರೂ. ಗಳನ್ನು ಕ್ರೀಡಾ ಕ್ಷೇತ್ರಕ್ಕೆ ಮೀಸಲಿಡಲಾಗಿತ್ತು. ಹಿಂದಿನ ಹಣಕಾಸು ವರ್ಷಕ್ಕಿಂತಲೂ 230.78 ಕೋಟಿ ರೂ.ಗಳ ಕಡಿತಗೊಳಿಸಿ ಹಂಚಿಕೆ ಮಾಡಲಾಗಿತ್ತು. ಆದರೆ ಪ್ರಸ್ತುತ ಬಜೆಟ್ನಲ್ಲಿ 305 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ನೀಡಿದೆ. ಇದು ಕ್ರೀಡಾ ಕ್ಷೇತ್ರಕ್ಕೆ ಹಿಂದೆಂದಿಗಿಂತಲೂ ನೀಡಿದ ಗರಿಷ್ಠ ಆಯವ್ಯಯ ಎಂಬ ದಾಖಲೆಗೆ ಪಾತ್ರವಾಗಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ