ಕೋಲ್ಕತ್ತಾ :ವೆಸ್ಟ್ ಇಂಡೀಸ್ ವಿರುದ್ಧ ಇಂದು ನಡೆಯಲಿರುವ ಕೊನೆಯ ಟಿ20 ಪಂದ್ಯವನ್ನು ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಸಾಧಿಸುವ ಉತ್ಸಾಹದಲ್ಲಿರುವ ಭಾರತ ತಂಡ ಇಂದು ತಂಡದಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.
ಈಗಾಗಲೇ ವಿರಾಟ್ ಕೊಹ್ಲಿ ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹಾಗಾಗಿ, ಕಳೆದ ಮೂರು ಸರಣಿಗಳಲ್ಲಿ ಬೆಂಚ್ ಕಾಯ್ದಿರುವ ರುತುರಾಜ್ ಗಾಯಕ್ವಾಡ್ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.
ಇಶಾನ್ ಕಿಶನ್ ವಿಕೆಟ್ ಕೀಪರ್ ಆಗಿ ಮುಂದುವರಿಯಲಿದ್ದಾರೆ. ಏಕದಿನ ತಂಡದಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಶ್ರೇಯಸ್ ಅಯ್ಯರ್ ಔಪಚಾರಿಕ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ದೀಪಕ್ ಚಾಹರ್ ಮತ್ತು ಹರ್ಷಲ್ ಪಟೇಲ್ ಬದಲಿಗೆ ಮೊಹಮ್ಮದ್ ಸಿರಾಜ್, ಆವೇಶ್ ಖಾನ್ ಅಥವಾ ಶಾರ್ದೂಲ್ ಠಾಕೂರ್, ಸ್ಪಿನ್ನರ್ ವಿಭಾಗದಲ್ಲಿ ಕುಲ್ದೀಪ್ ಯಾದವ್ಗೆ ಅವಕಾಶ ನೀಡಬಹುದು ಎನ್ನಲಾಗುತ್ತಿದೆ.
2ನೇ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಿ ಯಶಸ್ವಿಯಾಗಿರುವ ಭಾರತ ಮತ್ತೊಮ್ಮೆ ಇಂದಿನ ಪಂದ್ಯದಲ್ಲೂ ಟಾಸ್ ಗೆದ್ದರೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಡಿಫೆಂಡಿಂಗ್ನಲ್ಲೂ ತಂಡದ ಬಲವನ್ನು ಪರೀಕ್ಷೆ ಮಾಡಿದರೂ ಅಚ್ಚರಿಯಿಲ್ಲ.
ಇತ್ತ ಸತತ 5 ಸೀಮಿತ ಓವರ್ಗಳ ಪಂದ್ಯಗಳಲ್ಲಿ ಸೋಲು ಕಂಡಿರುವ ವೆಸ್ಟ್ ಇಂಡೀಸ್ ಕೊನೆಯ ಪಂದ್ಯವನ್ನಾದರೂ ಗೆದ್ದು ಖುಷಿಯಿಂದ ಪ್ರವಾಸವನ್ನು ಮುಗಿಸುವ ಇರಾದೆಯಲ್ಲಿದೆ.
ಭಾರತ ತಂಡ :ರೋಹಿತ್ ಶರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಹಲ್, ದೀಪಕ್ ಹೂಡಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್ , ಮೊಹಮ್ಮದ್ ಸಿರಾಜ್, ಅವೇಶ್ ಖಾನ್
ವೆಸ್ಟ್ ಇಂಡೀಸ್ ತಂಡ : ಬ್ರೆಂಡನ್ ಕಿಂಗ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್, ಕೀರನ್ ಪೊಲಾರ್ಡ್ (ನಾಯಕ), ಜೇಸನ್ ಹೋಲ್ಡರ್, ರಾಸ್ಟನ್ ಚೇಸ್, ಒಡಿಯನ್ ಸ್ಮಿತ್, ಅಕೀಲ್ ಹೊಸೈನ್, ರೊಮಾರಿಯೋ ಶೆಫರ್ಡ್, ಶೆಲ್ಡನ್ ಕಾಟ್ರೆಲ್, ಫ್ಯಾಬಿಯನ್ ಅಲೆನ್, ಡ್ಯಾರೆನ್ ಅಲೆನ್, ಶಾಯ್ ಹೋಪ್, ಡ್ವೇನ್ ಬ್ರಾವೋ, ಡೊಮಿನಿಕ್ ಡ್ರೇಕ್ಸ್, ಹೇಡನ್ ವಾಲ್ಷ್.
ಇದನ್ನೂ ಓದಿ:ರಣಜಿ ಟ್ರೋಫಿ : ಪದಾರ್ಪಣೆ ಪಂದ್ಯದಲ್ಲೇ 2 ಶತಕ ಸಿಡಿಸಿ ದಾಖಲೆ ಬರೆದ ಯಶ್ ಧುಲ್