ಮೌಂಟ್ ಮಾಂಗುನುಯಿ:ಬಾಂಗ್ಲಾದೇಶದ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಅತಿಥೇಯ ನ್ಯೂಜಿಲ್ಯಾಂಡ್ ತಂಡದ ಡೆವೊನ್ ಕಾನ್ವೆ ಮೊದಲ ದಿನವೇ ಶತಕ ಸಿಡಿಸಿದ್ದಾರೆ. ಈ ಮೂಲಕ ತವರಿನ ಮೊದಲ ಪಂದ್ಯ ಮತ್ತು ವಿದೇಶದ ಪಂದ್ಯದ ಮೊದಲ ದಿನವೇ ಶತಕ ಸಿಡಿಸಿದ ವಿಶ್ವದ ಏಕೈಕ ಟೆಸ್ಟ್ ಕ್ರಿಕೆಟರ್ ಎನಿಸಿಕೊಂಡಿದ್ದಾರೆ.
ಕಾನ್ವೆ ಈ ಮೊದಲು ಇಂಗ್ಲೆಂಡ್ ವಿರುದ್ಧ 2021ರ ಜೂನ್ನಲ್ಲಿ ಲಾರ್ಡ್ಸ್ನಲ್ಲಿ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿ ಮೊದಲ ದಿನವೇ ಶತಕ ಸಿಡಿಸಿದ್ದರು. ನಂತರ ಅದನ್ನು ದ್ವಿಶತಕವನ್ನಾಗಿ ಪರಿವರ್ತಿಸಿದ್ದರು. ಇದೀಗ ತವರಿನ ಅಭಿಮಾನಿಗಳ ಮುಂದೆ ನಡೆಯುತ್ತಿರುವ ಮೊದಲ ಪಂದ್ಯದಲ್ಲೂ ಶತಕ ಸಿಡಿಸಿದ್ದಾರೆ. ವಿಶೇಷವೆಂದರೆ ಇಲ್ಲೂ ಕೂಡ ಮೊದಲ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಕಾನ್ವೆ 227 ಎಸೆತಗಳಲ್ಲಿ 5 ವಿಕೆಟ್ ಕಳೆದುಕೊಂಡು 122 ರನ್ಗಳಿಸಿ ವಿಕೆಟ್ ಒಪ್ಪಿಸಿದರು.