ನವದೆಹಲಿ:ಏಕದಿನ ವಿಶ್ವಕಪ್ ಸರಣಿ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದ್ದು, ಇದರ ಬೆನ್ನಲ್ಲೇ ಇಂದು ಐಸಿಸಿ ನೂತ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರಿದ ಕೊಹ್ಲಿ 765 ರನ್ಗಳನ್ನು ಕಲೆ ಹಾಕಿ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ಗಳಿಸಿದ ಬ್ಯಾಟರ್ ಆಗಿ ಹೊರಹೊಮ್ಮಿದ್ದರು. ಇದರಿಂದ ರ್ಯಾಂಕಿಂಗ್ನಲ್ಲಿ ಸುಧಾರಣೆ ಕಂಡಿದ್ದು, ಮೂರನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.
ಇನ್ನು ವಿಶ್ವಕಪ್‌ನಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿ, ಎರಡನೇ ಹೈಸ್ಕೋರರ್ ಆಗಿ ಹೊರ ಹೊಮ್ಮಿದ್ದ ಹಿಟ್ ಮ್ಯಾನ್ ರೋಹಿತ್ ಶರ್ಮಾ ನಾಲ್ಕನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಉಳಿದಂತೆ ಯುವ ಬ್ಯಾಟರ್ ಶುಭಮನ್ ಗಿಲ್ ಮೊದಲ ಸ್ಥಾನವನ್ನು ಕಾಯ್ದುಕೊಂಡಿದ್ದರೆ, ಪಾಕಿಸ್ತಾನದ ಬಾಬರ್ ಅಜಾಮ್ ಎರಡನೇ ಸ್ಥಾನದಲ್ಲಿದ್ದಾರೆ. ಸದ್ಯ ಬ್ಯಾಟಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟಾಪ್ 5ರಲ್ಲಿ ಮೂವರು ಭಾರತೀಯ ಬ್ಯಾಟರ್ಗಳು ಕಾಣಿಸಿಕೊಂಡಿರುವುದು ವಿಶೇಷ.
ಐಸಿಸಿ ಅಗ್ರ 5 ಬ್ಯಾಟಿಂಗ್ ಶ್ರೇಯಾಂಕಗಳು
- ಶುಭ್ಮನ್ ಗಿಲ್- 826 ಅಂಕ
- ಬಾಬರ್ ಅಜಮ್- 824 ಅಂಕ
- ವಿರಾಟ್ ಕೊಹ್ಲಿ - 791 ಅಂಕ
- ರೋಹಿತ್ ಶರ್ಮಾ- 769 ಅಂಕ
- ಕ್ವಿಂಟನ್ ಡಿ ಕಾಕ್ - 760 ಅಂಕ