ಮುಂಬೈ:ಆಸ್ಟ್ರೇಲಿಯಾದಲ್ಲಿ ಆಯೋಜನೆಗೊಂಡಿರುವ 2020ರ ಟಿ-20 ವಿಶ್ವಕಪ್ ಟೂರ್ನಿ ಮುಂದೂಡಿಕೆಯಾಗಲಿದೆ. ನಿಗದಿತ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ನಡೆಯುವುದಿಲ್ಲ. ಮುಂದಿನ ವಾರ ಐಸಿಸಿ ಅಧಿಕೃತ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ಎಲ್ಲಾ ಕ್ರೀಡಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ. ಐಸಿಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ವ್ಯವಹಾರಗಳನ್ನು ನೋಡಿಕೊಳ್ಳುವ ಕ್ರಿಕೆಟ್ ಆಡಳಿತಗಾರರು ಮತ್ತು ಕ್ರಿಕೆಟ್ ಆಸ್ಟ್ರೇಲಿಯಾ ಟಿ-20 ವಿಶ್ವಕಪ್ ಆಯೋಜನೆಗೆ ಪರ್ಯಾಯ ಸಮಯ ಹುಡುಕಲಾಗುತ್ತಿದೆ.
ಕ್ರಿಕೆಟ್ ಆಸ್ಟ್ರೇಲಿಯಾ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಟೂರ್ನಿ ಆಯೋಜನೆಗೆ ಚಿಂತನೆ ನಡೆಸಿರಬಹುದು ಎಂದು ಹೇಳಲಾಗಿದೆ. ಆದರೆ, ಐಪಿಎಲ್ಗೂ ಮೊದಲೇ ಟೂರ್ನಿ ನಡೆಸಿದರೆ ಕ್ರಿಕೆಟ್ ಮೇಲಿನ ಉತ್ಸಾಹ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಭಾರತ ಮತ್ತು ಇಂಗ್ಲೆಂಡ್ ಟೂರ್ನಿಗೆ ಸಮಸ್ಯೆ ಆಗಲಿದೆ. ಇದೇ ವೇಳೆ ಹಲವು ಟೂರ್ನಿಗಳ ಪ್ರಸರ ಹಕ್ಕು ಪಡೆದಿರುವ ಸ್ಟಾರ್ ಸ್ಪೋರ್ಟ್ಸ್ ಕೂಡ ಈ ನಿರ್ಧಾರವನ್ನು ತಿರಸ್ಕರಿಸುವ ಸಾಧ್ಯತೆ ಇದೆ.