ಹೈದರಾಬಾದ್ : ಇಂದು ಭಾರತ ತಂಡದ ಚೈನ್ಮ್ಯಾನ್ ಬೌಲರ್ ಕುಲದೀಪ್ ಯಾದವ್ ಅವರ 27ನೇ ಜನ್ಮ ದಿನವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ.
ಕುಲದೀಪ್ ಯಾದವ್ ಡಿಸೆಂಬರ್ 14, 1994ರಲ್ಲಿ ಉತ್ತರ ಪ್ರದೇಶದ ಕಾನ್ಪುರದಲ್ಲಿ ಜನಿಸಿದರು. ಆರಂಭದಲ್ಲಿ ಕುಲದೀಪ್ ವೇಗದ ಬೌಲರ್ ಆಗಿದ್ದರು. ಆದರೆ ತಮ್ಮ ಕೋಚ್ ಸಲಹೆ ಮೇರೆಗೆ ಇವರು ಚೈನ್ಮ್ಯಾನ್ ಬೌಲರ್ರಾಗಿ ತಮ್ಮ ಶೈಲಿಯನ್ನು ಬದಲಾಯಿಸಿಕೊಂಡರು.
ಅಂಡರ್-19 ವಿಶ್ವಕಪ್‍ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಭಾರತೀಯ
ಕುಲದೀಪ್ 2014ರಲ್ಲಿ ನಡೆದ ಅಂಡರ್-19 ವಿಶ್ವಕಪ್‍ನಲ್ಲಿ ಸ್ಕಾಟ್ ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದರು. ಈ ಮೂಲಕ ಅಂಡರ್-19 ವಿಶ್ವಕಪ್‍ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಭಾರತೀಯ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಇದೇ ಸರಣಿಯೆಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಕೂಡ ಆಗಿದ್ದರು.
2017 ರಲ್ಲಿ ಅಂತಾರಾಷ್ತ್ರೀಯ ಕ್ರಿಕೆಟ್‍ಗೆ ಪಾದಾರ್ಪಣೆ..
2017ರಂದು ಧರ್ಮಶಾಲದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ 4ನೇ ಟೆಸ್ಟ್ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದರು. ತಮ್ಮ ಚೊಚ್ಚಲ ಪಂದ್ಯದಲ್ಲಿ 4 ವಿಕೆಟ್ ಪಡೆದು ಮಿಂಚಿದ್ದರು. ಅದೇ ವರ್ಷ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದರು. ಹಾಗೆಯೇ ಅದೇ ವರ್ಷ ವೆಸ್ಟ್ ಇಂಡೀಸ್ ವಿರುದ್ಧ ಟಿ-20 ಕ್ರಿಕೆಟ್ಗೂ ಪಾದಾರ್ಪಣೆ ಮಾಡಿದರು.
ಏಕದಿನ ಕ್ರಿಕೆಟ್ನಲ್ಲಿ ಎರಡು ಬಾರಿ ಹ್ಯಾಟ್ರಿಕ್ ಪಡೆದ ಮೊದಲ ಆಟಗಾರ..
ಅಂಡರ್-19 ವಿಶ್ವಕಪ್‍ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಭಾರತೀಯ ಕ್ರಿಕೆಟಿಗ ಇವರು. ಅದಲ್ಲದೆ ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್ನಲ್ಲಿ ಎರಡು ಬಾರಿ ಹ್ಯಾಟ್ರಿಕ್ ಪಡೆದ ಮೊದಲ ಆಟಗಾರನೂ ಕೂಡಾ ಹೌದು.
ಏಕದಿನ ಕ್ರಿಕೆಟ್ನಲ್ಲಿ ಭಾರತ ಪರ ಕುಲದೀಪ್ ಯಾದವ್ ವೇಗವಾಗಿ 100 ವಿಕೆಟ್ ಪಡೆದ ಮೊದಲ ಆಟಗಾರ ಎಂಬ ಹಿರಿಮೆಯನ್ನು ಪಡೆದಿದ್ದಾರೆ.
ಓದಿ :ಐತಿಹಾಸಿಕ ಪಿಂಕ್ ಬಾಲ್ ಟೆಸ್ಟ್ ಪಂದ್ಯ: 11 ಆಟಗಾರರ ಆಸೀಸ್ ತಂಡ ಹೆಸರಿಸಿದ ವಾರ್ನ್