ಪೋರ್ಟ್ ಆಫ್ ಸ್ಪೈನ್: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಪ್ರವಾಸಿ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.
ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸರಣಿಯ ಮೊದಲ ಪಂದ್ಯವಾಡಿದ್ದ 11ರ ಬಳಗವನ್ನೇ ಈ ಪಂದ್ಯದಲ್ಲೂ ಮುಂದುವರಿಸಲಾಗಿದೆ. ವಿಂಡೀಸ್ ಪರ ಗಾಯಗೊಂಡಿರುವ ಫಾಬಿನ್ ಅಲೆನ್ ಬದಲು ಒಸಾನ್ ಥಾಮಸ್ಗೆ ಅವಕಾಶ ನೀಡಲಾಗಿದೆ.
ಮೊದಲ ಪಂದ್ಯ ಮಳೆಗೆ ಆಹುತಿಯಾಗಿದ್ದು, ಇಂದಿನ ಪಂದ್ಯ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ. ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬೌಲಿಂಗ್ ಆಯ್ದುಕೊಂಡಿತ್ತು. ಆದರೆ ಮಳೆಯ ಕಾರಣ 13 ಓವರ್ಗಳ ಆಟ ಮಾತ್ರ ನಡೆದಿತ್ತು.