ಜೋಹನ್ಸ್ಬರ್ಗ್ :ಇಂಗ್ಲೆಂಡ್ ವಿರುದ್ಧದ ಸರಣಿಗೆ ತಯಾರಾಗುತ್ತಿದ್ದ ದಕ್ಷಿಣ ಆಫ್ರಿಕಾ ಮಹಿಳಾ ತಂಡದ 3 ಆಟಗಾರ್ತಿಯರು ಹಾಗೂ ಸಿಬ್ಬಂದಿಗೆ ಕೋವಿಡ್ 19 ಟೆಸ್ಟ್ನಲ್ಲಿ ಪಾಸಿಟಿವ್ ವರದಿ ಬಂದಿದೆ ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾ ಶುಕ್ರವಾರ ಪ್ರಕಟಣೆ ಹೊರಡಿಸಿದೆ. ಜುಲೈ 27ರಂದು ಆರಂಭವಾಗಬೇಕಿದ್ದ ಮಹಿಳಾ ತರಬೇತಿ ಕ್ಯಾಂಪ್ಗೂ ಮುನ್ನ ಕೋವಿಡ್-19 ಸರಣಿ ಪರೀಕ್ಷೆಯನ್ನು ನಡೆಸುವುದಾಗಿ ಕ್ರಿಕೆಟ್ ಬೋರ್ಡ್ ತಿಳಿಸಿದೆ.
ಕೋವಿಡ್ ಟೆಸ್ಟ್ನಲ್ಲಿ ಪಾಸಿಟಿವ್ ವರದಿ ಬಂದಿರುವ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ 10 ದಿನಗಳವರೆಗೆ ಸ್ವಯಂ ಐಸೋಲೇಷನ್‌ಗೆ ಒಳಗಾಗಿದ್ದಾರೆ. ಮತ್ತು ಅವರು ತರಬೇತಿ ಶಿಬಿರದಲ್ಲಿ ಭಾಗವಹಿಸುವುದಿಲ್ಲ" ಎಂದು ಸಿಎಸ್ಎ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.