ರಾಂಚಿ:ಭಾರತ-ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟೆಸ್ಟ್ನ ಮೂರನೇ ದಿನದಾಟದಲ್ಲಿ ಭಾರತೀಯ ಬೌಲರ್ಗಳು ಮೇಲುಗೈ ಸಾಧಿಸಿದ್ದು, ಭೋಜನ ವಿರಾಮದ ವೇಳೆಗೆ ಪ್ರವಾಸಿ ತಂಡ 6 ವಿಕೆಟ್ ನಷ್ಟಕ್ಕೆ 129 ರನ್ ಕಲೆ ಹಾಕಿದೆ.
ಎರಡನೇ ದಿನದಾಟದ ಅಂತ್ಯ 2 ವಿಕೆಟ್ ಕಳೆದುಕೊಂಡಿದ್ದ ಆಫ್ರಿಕನ್ನರು ಇಂದು ಮುಂಜಾನೆ ನಾಯಕ ಫ್ಲೆಸಿಸ್ ವಿಕೆಟ್ ಕಳೆದುಕೊಂಡಿತು.
ನಾಯಕನ ನಿರ್ಗಮನ ಬಳಿಕ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡುತ್ತಿರುವ ಝುಬೈರ್ ಹಂಝಾ ಆಕರ್ಷಕ ಅರ್ಧಶತಕ ಸಿಡಿಸಿ ತಂಡಕ್ಕೆ ನೆರವಾದರು. 79 ಎಸೆತದಲ್ಲಿ 1 ಸಿಕ್ಸರ್ ಹಾಗೂ 10 ಬೌಂಡರಿ ಸಹಿತ 62 ರನ್ ಗಳಿಸಿ ಜಡೇಜಾ ಎಸೆತಕ್ಕೆ ಬಲಿಯಾದರು. ಇವರಿಗೆ ಉತ್ತಮ ಸಾಥ್ ನೀಡಿದ ತೆಂಬಾ ಬವುಮಾ 32 ರನ್ನಿಗೆ ನದೀಮ್ಗೆ ವಿಕೆಟ್ ಒಪ್ಪಿಸಿದರು.