ಚೆನ್ನೈ:ಭಾರತೀಯ ಕ್ರಿಕೆಟ್ ಮಂಡಳಿ ಹಾಗೂ ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ಮಧ್ಯೆ ನಡೆದ ಮಾತುಕತೆ ಯಶಸ್ವಿಯಾಗಿದೆ. ಹೀಗಾಗಿ ಭಾರತ-ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ವೀಕ್ಷಣೆ ಮಾಡಲು ಶೇ. 50ರಷ್ಟು ಕ್ರೀಡಾಭಿಮಾನಿಗಳಿಗೆ ಅವಕಾಶ ನೀಡಲಾಗಿದೆ.
ಫೆ.13ರಂದು ಚೆನ್ನೈ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲಿದ್ದು, ಈ ಪಂದ್ಯ ವೀಕ್ಷಣೆ ಮಾಡಲು ಅಭಿಮಾನಿಗಳಿಗೆ ಅನುವು ಮಾಡಿಕೊಡಲಾಗಿದೆ. ಇನ್ನು ಮೊದಲ ಟೆಸ್ಟ್ ಪಂದ್ಯ ವೀಕ್ಷಣೆ ಮಾಡಲು ಅನುಮತಿ ನೀಡಿಲ್ಲ. ಇನ್ನು ಮೂರನೇ ಹಾಗೂ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಣೆ ಮಾಡಲು ಈಗಾಗಲೇ ಅನುಮತಿ ನೀಡಲಾಗಿದೆ.