ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಹೊಸ ಹೊಸ ದಾಖಲೆ ನಿರ್ಮಾಣಗೊಳ್ಳುತ್ತಿದ್ದು, ಅದೇ ರೀತಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲೂ ಇದೀಗ ಈ ಹಿಂದೆ ನಿರ್ಮಾಣಗೊಳ್ಳದ ರೀತಿಯಲ್ಲಿ ವಿಶೇಷ ರೆಕಾರ್ಡ್ ಮೂಡಿ ಬಂದಿದೆ.
ನಿನ್ನೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸಿದ್ದು, 58 ಎಸೆತಗಳಲ್ಲಿ 101ರನ್ಗಳಿಕೆ ಮಾಡಿರುವ ಶಿಖರ್ ಧವನ್ ಪಂದ್ಯಶ್ರೇಷ್ಠ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ತಂಡ ಇಲ್ಲಿಯವರೆಗೆ 9 ಪಂದ್ಯಗಳನ್ನಾಡಿದ್ದು, ಅದರಲ್ಲಿ 7ರಲ್ಲಿ ಗೆದ್ದು, 2ರಲ್ಲಿ ಸೋಲು ಕಾಣುವ ಮೂಲಕ ಅಂಕಪಟ್ಟಿಯಲ್ಲಿ ಸದ್ಯ ಅಗ್ರಸ್ಥಾನದಲ್ಲಿದೆ.