ವೆಲ್ಲಿಂಗ್ಟನ್:ನ್ಯೂಜಿಲ್ಯಾಂಡ್ ವಿರುದ್ಧ ನಡೆದ 4ನೇ ಟಿ-20 ಪಂದ್ಯದಲ್ಲಿ ಗಮನಾರ್ಹ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ ಕ್ಯಾಪ್ಟನ್ ಆ್ಯರೊನ್ ಫಿಂಚ್ 55 ಎಸೆತಗಳಲ್ಲಿ 5 ಬೌಂಡರಿ, 4 ಸಿಕ್ಸರ್ ಸೇರಿದಂತೆ ಅಜೇಯ 79 ರನ್ಗಳಿಕೆ ಮಾಡಿದ್ದು, ಈ ಮೂಲಕ ಹೊಸದೊಂದು ದಾಖಲೆ ಬರೆದಿದ್ದಾರೆ.
ಟಿ-20 ಕ್ರಿಕೆಟ್ನಲ್ಲಿ 100 ಸಿಕ್ಸರ್ ಸಿಡಿಸಿರುವ ಆಸ್ಟ್ರೇಲಿಯಾದ ಮೊದಲ ಕ್ರಿಕೆಟ್ ಪ್ಲೇಯರ್ ಎಂಬ ಹೆಗ್ಗಳಿಕೆಗೆ ಇದೀಗ ಅವರು ಪಾತ್ರರಾಗಿದ್ದಾರೆ. ಜತೆಗೆ ಟಿ-20 ಕ್ರಿಕೆಟ್ನಲ್ಲಿ ಕಾಂಗರೂ ಪರ ಅತಿ ಹೆಚ್ಚು ರನ್ಗಳಿಕೆ ಮಾಡಿರುವ ಪ್ಲೇಯರ್ ಆಗಿ ಹೊರಹೊಮ್ಮಿದ್ದಾರೆ. ಇಂದಿನ ಪಂದ್ಯದಲ್ಲಿ ಒಂದೇ ಓವರ್ನಲ್ಲಿ ಫಿಂಚ್ 4 ಸಿಕ್ಸರ್ ಸಿಡಿಸಿರುವುದು ಕೂಡ ವಿಶೇಷವಾಗಿದೆ.