ದುಬೈ: ಆರಂಭಿಕರಾದ ಆ್ಯರೋನ್ ಫಿಂಚ್-ದೇವದತ್ ಪಡಿಕ್ಕಲ್ ಹಾಗೂ ಸ್ಫೋಟಕ ಬ್ಯಾಟ್ಸ್ಮನ್ ಎಬಿ ಡಿ ವಿಲಿಯರ್ಸ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈಗೆ ಗೆಲ್ಲಲು 202 ರನ್ಗಳ ಬೃಹತ್ ಟಾರ್ಗೆಟ್ ನೀಡಿದೆ.
ಟಾಸ್ ಸೋತು ಬ್ಯಾಟಿಂಗ್ ಇಳಿದ ಆರ್ಸಿಬೆಗೆ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಲಯಕ್ಕೆ ಮರಳಿದ ಆಸೀಸ್ ಬ್ಯಾಟ್ಸ್ಮನ್ ಫಿಂಚ್ ಕೇವಲ 35 ಎಸೆತಗಳಲ್ಲಿ 7 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 52 ರನ್ಗಳಿಸಿ ಬೌಲ್ಟ್ಗೆ ವಿಕೆಟ್ ನೀಡಿದರು. ಅವರು ಯುವ ಬ್ಯಾಟ್ಸ್ಮನ್ ದೇವದತ್ ಪಡಿಕ್ಕಲ್ ಜೊತೆಗೆ ಮೊದಲ ವಿಕೆಟ್ಗೆ 81 ರನ್ಗಳ ಜೊತೆಯಾಟ ನಡೆಸಿದರು.
ನಂತರ ಬಂದ ನಾಯಕ ವಿರಾಟ್ ಕೊಹ್ಲಿ ಇಂದು ಕೂಡ ರನ್ಗಳಿಸಲು ಪರದಾಡಿ 11 ಎಸೆತಗಳಲ್ಲಿ ಕೇವಲ 3 ರನ್ಗಳಿಸಿ ರಾಹುಲ್ ಚಹಾರ್ಗೆ ವಿಕೆಟ್ ಒಪ್ಪಿಸಿದರು.
ವಿರಾಟ್ ನಂತರ ಬಂದ ಮಿಸ್ಟರ್ 360 ಡಿಗ್ರಿ ಖ್ಯಾತಿ ವಿಲಿಯರ್ಸ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿದರು. ಅವರು 3 ನೇ ವಿಕೆಟ್ಗೆ ದೇವದತ್ ಜೊತೆ ಸೇರಿ 35 ಎಸೆತಗಳಲ್ಲಿ 62 ರನ್ ಸೇರಿಸಿದರು. 40 ಎಸೆತಗಳಲ್ಲಿ 2 ಭರ್ಜರಿ ಸಿಕ್ಸರ್ ಹಾಗೂ 5 ಬೌಂಡರಿ ಸಹಿತ 54 ರನ್ಗಳಿಸಿದ್ದ ದೇವದತ್ ಬೌಲ್ಟ್ ಬೌಲಿಂಗ್ನಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ಪೊಲಾರ್ಡ್ಗೆ ಕ್ಯಾಚ್ ನೀಡಿ ಔಟಾದರು.
ತನ್ನ ಸ್ಫೋಟಕ ಬ್ಯಾಟಿಂಗ್ ಮುಂದುವರಿಸಿದ ವಿಲಿಯರ್ಸ್ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅವರು 24 ಎಸೆತಗಳಲ್ಲಿ ತಲಾ 4 ಬೌಂಡರಿ ಹಾಗೂ ಸಿಕ್ಸರ್ ಸಹಿತ 51 ರನ್ಗಳಿಸಿ ಔಟಾಗದೆ ಉಳಿದರೆ, ಕೊನೆಯ ಓವರ್ನಲ್ಲಿ ಅಬ್ಬರಿಸಿದ ಶಿವಂ ದುಬೆ ಕೇವಲ 10 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ ಒಂದು ಬೌಂಡರಿ ಸಹಿತ 27 ರನ್ಗಳಿಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು.
ಅರ್ಸಿಬಿ ತನ್ನ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 201 ರನ್ಗಳಿಸಿದೆ.
ಮುಂಬೈ ಪರ ಟ್ರೆಂಟ್ ಬೌಲ್ಟ್ 34ಕ್ಕೆ ಹಾಗೂ ರಾಹುಲ್ ಚಹಾರ್ 31ಕ್ಕೆ ವಿಕೆಟ್ ಪಡೆದರು. ಆದರೆ ಸ್ಟಾರ್ ಬೌಲರ್ ಬುಮ್ರಾ 4 ಓವರ್ಗಳಲ್ಲಿ 42 ರನ್ ಬಿಟ್ಟುಕೊಟ್ಟರೆ, ಪ್ಯಾಟಿನ್ಸನ್ 51 ರನ್ಗಳಿಸಿ ದುಬಾರಿಯಾದರು: