ಹೈದರಾಬಾದ್: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಮತ್ತು ಟಿ20 ಸರಣಿ ಮುಕ್ತಾಯದ ನಂತರ ಭಾರತಕ್ಕೆ ಮರಳಿರುವ ಅಲ್ರೌಂಡ್ ಆಟಗಾರ ಹಾರ್ದಿಕ್ ಪಾಂಡ್ಯ, ನಾಲ್ಕು ತಿಂಗಳ ನಂತರ ಮೊದಲ ಬಾರಿಗೆ ತಮ್ಮ ಮಗನನ್ನು ಭೇಟಿಯಾಗಿದ್ದಾರೆ.
ಹಾರ್ದಿಕ್ ಪಾಂಡ್ಯ ಶನಿವಾರ ತಮ್ಮ ಮಗನೊಂದಿಗೆ ಇರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. 'ರಾಷ್ಟ್ರದ ಕರ್ತವ್ಯದಿಂದ ತಂದೆಯ ಕರ್ತವ್ಯದವರೆಗೆ' ಎಂದು ಮಗನಿಗೆ ಬಾಟಲ್ನಲ್ಲಿ ಹಾಲುಣಿಸುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
ಆಸ್ಟ್ರೇಲಿಯಾ ಪ್ರವಾಸದ ಮೊದಲು ಯುಎಇಯಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಭಾಗವಹಿಸಿದ್ದ ಪಾಂಡ್ಯ 4 ತಿಂಗಳಿಗೂ ಅಧಿಕ ಕಾಲ ಕುಟುಂಬದಿಂದ ದೂರ ಉಳಿದಿದ್ದರು.
ಜುಲೈ 30 ರಂದು ತಂದೆಯಾಗಿದ್ದ ಅವರು, ಐಪಿಎಲ್ ಟೂರ್ನಿಗಾಗಿ ಒಂದು ತಿಂಗಳೊಳಗೆ ಯುಎಇಗೆ ತೆರಳಬೇಕಾಯಿತು. ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ನಂತರ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳಿಗಾಗಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಭಾರತೀಯ ತಂಡದ ಭಾಗವಾಗಿದ್ದರು. ಭಾರತ ಏಕದಿನ ಸರಣಿಯಲ್ಲಿ ಸೋಲು ಕಂಡಿದ್ರೆ, ಟಿ20 ಸರಣಿಯನ್ನು ಗೆದ್ದುಕೊಂಡಿತ್ತು. ಎರಡೂ ಸರಣಿಗಳಲ್ಲಿ ಹಾರ್ದಿಕ್ ಪಾಂಡ್ಯ ಅಮೋಘ ಪ್ರದರ್ಶನ ನೀಡಿದ್ರು.