ಹೈದರಾಬಾದ್: ಆಸೀಸ್ ವಿರುದ್ಧ ವಿರಾಟ್ ಕೊಹ್ಲಿ ನಾಯಕತ್ವ ಟೀಂ ಇಂಡಿಯಾ ಹೀನಾಯವಾಗಿ ಸೋಲು ಕಂಡ ನಂತರ ನಟಿ ಅನುಷ್ಕಾ ಶರ್ಮಾ ಟ್ವಿಟರ್‌ನಲ್ಲಿ ಟ್ರೆಂಡ್ ಆಗುತ್ತಿದ್ದಾರೆ.
ಇತ್ತೀಚೆಗೆ ಭಾರತ ತಂಡ ಸೋಲಿನ ಬಳಿಕ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಅವರನ್ನು ಟ್ರೋಲ್ ಮಾಡುವುದು ಸಾಮಾನ್ಯವಾಗಿಬಿಟ್ಟಿದೆ. ಅದರಂತೆ ಟೆಸ್ಟ್ ಕ್ರಿಕೆಟ್ನಲ್ಲೆ ಕಳಪೆ ದಾಖಲೆ ಬರೆದ ಟೀಂ ಇಂಡಿಯಾ ಆಸೀಸ್ ವಿರುದ್ಧ 8 ವಿಕೆಟ್ಗಳ ಸೋಲು ಅನುಭವಿಸಿದ ನಂತರ ಅನುಷ್ಕಾ ಶರ್ಮಾ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ಗಳನ್ನು ಎದುರಿಸುತ್ತಿದ್ದಾರೆ.
ಅಡಿಲೇಡ್ ಓವಲ್‌ನಲ್ಲಿ ಟೀಂ ಇಂಡಿಯಾ ನೀರಸ ಪ್ರದರ್ಶನ ತೋರಿದ ನಂತರ ಅನುಷ್ಕಾ ಶರ್ಮಾ ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿದ್ದು, ಕ್ರಿಕೆಟಿಗರಾದ ಮಹೇಂದ್ರ ಸಿಂಗ್ ಧೋನಿ ಮತ್ತು ರೋಹಿತ್ ಶರ್ಮಾ ಕೂಡ ಇದ್ದಾರೆ.