ಲಂಡನ್:ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಆ್ಯಶಸ್ ಟೆಸ್ಟ್ ಸರಣಿಯ 2ನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಳ್ಳುವ ಮೂಲಕ 20 ಟೆಸ್ಟ್ಗಳ ನಂತರ ಮೊದಲ ಬಾರಿಗೆ ಫಲಿತಾಂಶ ರಹಿತವಾಗಿ ಅಂತ್ಯಗೊಂಡಿದೆ.
ಮೊದಲ ಪಂದ್ಯದಲ್ಲಿ 251 ರನ್ಗಳ ಬೃಹತ್ ಅಂತರದಿಂದ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ಎರಡನೇ ಟೆಸ್ಟ್ನಲ್ಲಿ ಸೋಲಿನ ದವಡೆಯಿಂದ ತಪ್ಪಿಸಿಕೊಂಡು ಡ್ರಾ ಸಾಧಿಸಿದೆ. 5ನೇ ದಿನ 258 ರನ್ಗಳಿಸಿ ಇಂಗ್ಲೆಂಡ್ ಡಿಕ್ಲೇರ್ ಘೋಷಿಸಿಕೊಂಡು ಆಸ್ಟ್ರೇಲಿಯಾಗೆ 267 ರನ್ಗಳ ಟಾರ್ಗೆಟ್ ನೀಡಿತ್ತು.
ಆಸ್ಟ್ರೇಲಿಯಾ ಗೆಲುವಿಗೆ 48 ಓವರ್ಗಳಲ್ಲಿ 267 ರನ್ಗಳಿಸಬೇಕಿತ್ತು. ಆದರೆ, ನಿಗಧಿತ ಓವರ್ಗಳಲ್ಲಿ ಆಸ್ಟ್ರೇಲಿಯಾ 6 ವಿಕೆಟ್ ಕಳೆದುಕೊಂಡು 154 ರನ್ಗಳಿಸಿ ಪಂದ್ಯವನ್ನು ಡ್ರಾನಲ್ಲಿ ಕೊನೆಗಾಣುವಂತೆ ಮಾಡಿತು. ಇಂಗ್ಲೆಂಡ್ ಪರ ಅದ್ಭುತ ಬೌಲಿಂಗ್ ದಾಳಿ ನಡೆಸಿದ ಆರ್ಚರ್ 3 ವಿಕೆಟ್, ಜಾಕ್ ಲೀಚ್ 3 ವಿಕೆಟ್ ಪಡೆದು ಗೆಲುವು ಪಡೆಯಲು ಸಾಕಷ್ಟು ಪ್ರಯತ್ನ ಮಾಡಿದರು.
ಇಂಗ್ಲೆಂಡ್ ಪರ 2ನೇ ಇನ್ನಿಂಗ್ಸ್ನಲ್ಲಿ ಶತಕ ಸಿಡಿಸಿದ ಬೆನ್ ಸ್ಟೋಕ್ಸ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ನಲ್ಲಿ 258 ಹಾಗೂ ಎರಡನೇ ಇನ್ನಿಂಗ್ಸ್ನಲ್ಲೂ 258 ರನ್ಗಳಿಸಿತ್ತು. ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 250 ಹಾಗೂ ಎರಡನೇ ಇನ್ನಿಂಗ್ಸ್ನಲ್ಲಿ 6 ವಿಕೆಟ್ ಕಳೆದುಕೊಂಡು 156 ರನ್ಗಳಿಸಿತ್ತು.
ಈ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದ್ದರಿಂದ ಎರಡು ತಂಡಗಳು ತಲಾ 8 ಅಂಕ ಹಂಚಿಕೊಂಡವು. ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ 32 ಅಂಕಗಳೊಂದಿಗೆ 2ನೇ ಸ್ಥಾನ ಹಾಗೂ 8 ಅಂಕ ಪಡೆದಿರುವ ಇಂಗ್ಲೆಂಡ್ ಮೂರನೇ ಸ್ಥಾನ ಪಡೆದಿದೆ. 60 ಅಂಕ ಪಡೆದಿರುವ ಶ್ರೀಲಂಕಾ ತಂಡ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಮೂರನೇ ಆ್ಯಶಸ್ ಟೆಸ್ಟ್ ಪಂದ್ಯ ಅಗಸ್ಟ್ 22 ರಿಂದ ಲೀಡ್ಸ್ನಲ್ಲಿ ಆರಂಭವಾಗಲಿದೆ.