ಅಹ್ಮದಾಬಾದ್:ಅಕ್ಸರ್ ಪಟೇಲ್ ದಾಳಿಗೆ ಸಿಲುಕಿದ ಇಂಗ್ಲೆಂಡ್ ತಂಡ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 205 ರನ್ಗಳಿಗೆ ಆಲೌಟ್ ಆಗಿದೆ. ಇನ್ನು ಮೊದಲ ಇನ್ನಿಂಗ್ಸ್ ಆರಂಭಿಸಿರುವ ಭಾರತ ತಂಡ ಖಾತೆ ತೆರೆಯುವ ಮುನ್ನವೇ ಶುಬ್ಮನ್ ಗಿಲ್ ವಿಕೆಟ್ ಪಡೆದುಕೊಂಡಿದೆ.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಈ ಪಂದ್ಯದಲ್ಲೂ ಇಂಗ್ಲೆಂಡ್ನ ಆರಂಭಿಕರು ಉತ್ತಮ ಆರಂಭ ಒದಗಿಸಿಕೊಡುವಲ್ಲಿ ವಿಫಲರಾದರು. ಡೊಮಿನಿಕ್ ಬೆಸ್ (2) ಮತ್ತು ಜಾಕ್ ಕ್ರಾಲೆ(9) ಅಕ್ಷರ್ ಪಟೇಲ್ಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ಜಾನಿ ಬೈರ್ಸ್ಟೋವ್ 28 ರನ್ ಮತ್ತು ರೂಟ್ 5 ರನ್ಗಳಿಸಿ ವೇಗಿ ಸಿರಾಜ್ಗೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಒಂದಾದ ಆಲ್ರೌಂಡರ್ ಬೆನ್ ಸ್ಟೋಕ್ಸ್ ಮತ್ತು ಒಲಿ ಪೋಪ್ 5ನೇ ವಿಕೆಟ್ ಜೊತೆಯಾಟದಲ್ಲಿ 43 ರನ್ಗಳಿಸಿದರು.
121 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 6 ಬೌಂಡರಿ ಸಹಿತ 55 ರನ್ಗಳಿಸಿದ್ದ ಬೆನ್ ಸ್ಟೋಕ್ಸ್ ಯುವ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಓವರ್ನಲ್ಲಿ ಎಲ್ಬಿ ಬಲೆಗೆ ಬಿದ್ದರು. ನಿಧಾನಗತಿ ಆಟಕ್ಕೆ ಮೊರೆ ಹೋದ ಪೋಪ್ 87 ಎಸೆತಗಳಲ್ಲಿ 2 ಬೌಂಡರಿ ಸಹಿತ 29 ರನ್ಗಳಿಸಿದ್ದಲ್ಲದೆ, ಲಾರೆನ್ಸ್ ಜೊತೆಗೆ 45 ರನ್ಗಳ ಜೊತೆಯಾಟ ನೀಡಿ ತಂಡವನ್ನು 150ರ ಗಡಿ ದಾಟಿಸಿ ಅಶ್ವಿನ್ಗೆ ಮೊದಲ ಬಲಿಯಾದರು.